ಮಂಗಳವಾರ, 30 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಷಮೆ ಕೇಳದಿದ್ದರೆ ರಾಹುಲ್‌ ಗಾಂಧಿ ವಿರುದ್ಧ ದೂರು: ಸಾವರ್ಕರ್‌ ಮೊಮ್ಮಗ

Last Updated 28 ಮಾರ್ಚ್ 2023, 8:58 IST
ಅಕ್ಷರ ಗಾತ್ರ

ನವದೆಹಲಿ: ವಿ.ಡಿ ಸಾವರ್ಕರ್ ಕುರಿತು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನೀಡಿದ ಹೇಳಿಕೆ ಬಗ್ಗೆ ದೂರು ದಾಖಲಿಸುವುದಾಗಿ, ಸಾವರ್ಕರ್‌ ಮೊಮ್ಮಗ ರಂಜಿತ್‌ ಸಾವರ್ಕರ್‌ ಹೇಳಿದ್ದಾರೆ.

ಅಲ್ಲದೇ ರಾಹುಲ್‌ ಗಾಂಧಿಯವರಿಗೆ ಕ್ಷಮಾಪಣೆ ಕೇಳಲು ಹೇಳಿ ಎಂದು ಎನ್‌ಸಿಪಿ ಮುಖಂಡ ಶರದ್‌ ಪವಾರ್‌ ಅವರನ್ನು ಒತ್ತಾಯಿಸಿದ್ದಾರೆ.

ಎಎನ್‌ಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು, ರಾಹುಲ್‌ ಗಾಂಧಿ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಉದ್ಧವ್‌ ಠಾಕ್ರೆ ಅವರನ್ನು ಒತ್ತಾಯಿಸಿದ್ದಾರೆ.

‘ಉದ್ಧವ್‌ ಠಾಕ್ರೆ ಹಾಗೂ ಸಂಜಯ್‌ ರಾವತ್‌ ಅವರು ವೈಯಕ್ತಿಕವಾಗಿ ಸಾವರ್ಕರ್‌ ಅವರ ಬಗ್ಗೆ ಗೌರವ ಇಟ್ಟುಕೊಂಡಿದ್ದಾರೆ. ಸಾವರ್ಕರ್‌ ಬಗ್ಗೆ ರಾಹುಲ್‌ ಗಾಂಧಿ ನೀಡಿದ ಹೇಳಿಕೆ ಬಗ್ಗೆ ಕ್ಷಮೆ ಯಾಚಿಸಬೇಕು ಎಂದು ಅವರು ರಾಹುಲ್‌ ಗಾಂಧಿ ಅವರಲ್ಲಿ ಕೇಳಿಕೊಳ್ಳಬೇಕು. ಯಾರು ನಮ್ಮ ದೇವರನ್ನು ಅವಮಾನಿಸುತ್ತಾರೋ ಅವರ ಜತೆ ನಾವು ಇರಬಾರದು. ಒಂದು ವೇಳೆ ಸಾವರ್ಕರ್‌ ಅವರ ಬಗ್ಗೆ ಗೌರವ ಇರುವುದೇ ಆದರೆ ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು‘ ಎಂದು ಅವರು ಆಗ್ರಹಿಸಿದ್ದಾರೆ.

‘ಉದ್ಧವ್‌ ಠಾಕ್ರೆ ಮುಖ್ಯಮಂತ್ರಿಯಾಗಿದ್ದಾಗ, ಕಾಂಗ್ರೆಸ್‌ ಮುಖವಾಣಿ ಸಾವರ್ಕರ್‌ ಬಗ್ಗೆ ಕೊಳಕು ಪದಗಳನ್ನುಬಳಕೆ ಮಾಡಿತ್ತು. ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು ಎಂದು ನಾನು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೆ. ಆದರೆ ಯಾವ ಕ್ರಮವೂ ತೆಗೆದುಕೊಂಡಿರಲಿಲ್ಲ. ರಾಹುಲ್‌ ಗಾಂಧಿ ಈ ಹಿಂದೆ ನೀಡಿದ ಹೇಳಿಕೆಗೆ ಬಗ್ಗೆ ದೂರು ದಾಖಲಿಸಿದ್ದೇನೆ. ಈಗ ನೀಡಿರುವ ಹೇಳಿಕೆ ಬಗ್ಗೆ ಕ್ಷಮೆ ಯಾಚಿಸದಿದ್ದರೆ ಎಫ್‌ಐಆರ್‌ ದಾಖಲು ಮಾಡುತ್ತೇನೆ‘ ಎಂದು ರಂಜಿತ್‌ ಹೇಳಿದ್ದಾರೆ.

‘ನನ್ನ ಹೆಸರು ಸಾವರ್ಕರ್‌ ಅಲ್ಲ, ಗಾಂಧಿ. ಗಾಂಧಿ ಎಂದಿಗೂ ಕ್ಷಮೆ ಕೇಳುವುದಿಲ್ಲ' ಎಂದು ರಾಹುಲ್‌ ಗಾಂಧಿ ಹೇಳಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT