ಬುಧವಾರ, ಅಕ್ಟೋಬರ್ 20, 2021
25 °C

ಲಖಿಂಪುರ ಘಟನೆ ತಪ್ಪಿತಸ್ಥರ ಬಂಧಿಸದಿದ್ದರೆ ಮೋದಿ ಮನೆಗೆ ಮುತ್ತಿಗೆ: ಭೀಮ್ ಆರ್ಮಿ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ನಡೆದ ಘಟನೆಯ ತಪ್ಪಿತಸ್ಥರನ್ನು 7 ದಿನಗಳ ಒಳಗಾಗಿ ಬಂಧಿಸದಿದ್ದರೆ ಪ್ರಧಾನಿ ನರೇಂದ್ರ ಮೋದಿ ಅವರ ಮನೆಗೆ ಮುತ್ತಿಗೆ ಹಾಕುವುದಾಗಿ ಭೀಮ್ ಆರ್ಮಿ, ಆಜಾದ್ ಸಮಾಜ ಪಕ್ಷದ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಶುಕ್ರವಾರ ಹೇಳಿದ್ದಾರೆ.

ಪ್ರಧಾನಿಯವರು ರೈತರ ಜತೆ ಮಾತುಕತೆ ನಡೆಸಬೇಕು. ಲಖಿಂಪುರ ಖೇರಿಗೆ ತೆರಳಿ ಮೃತ ರೈತರ ಕುಟುಂಬದವರನ್ನು ಭೇಟಿ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

‘ಪ್ರಧಾನಿಯವರು ಪ್ರತಿಯೊಂದು ವಿಚಾರಕ್ಕೂ ಟ್ವೀಟ್ ಮಾಡುತ್ತಾರೆ. ಆದರೆ ರೈತರ ಹತ್ಯೆ ಬಗ್ಗೆ ಈವರೆಗೆ ಪ್ರತಿಕ್ರಿಯಿಸಿಲ್ಲ. ತಪ್ಪಿತಸ್ಥರು ಆರಾಮವಾಗಿದ್ದಾರೆ. ಏಳು ದಿನಗಳ ಒಳಗಾಗಿ ತಪ್ಪಿತಸ್ಥರನ್ನು ಬಂಧಿಸದಿದ್ದರೆ ಪ್ರಧಾನಿ ಅವರ ಮನೆಗೆ ಮುತ್ತಿಗೆ ಹಾಕಲಿದ್ದೇವೆ’ ಎಂದು ಆಜಾದ್ ಹೇಳಿದ್ದಾರೆ.

ಲಖಿಂಪುರ ಖೇರಿ ಘಟನೆಯನ್ನು ಅವರು ಜಲಿಯನ್‌ ವಾಲಾ ಭಾಗ್ ಹತ್ಯಾಕಾಂಡಕ್ಕೆ ಹೋಲಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು