ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಮಹಾ' ರಾಜ್ಯಪಾಲರ ಸೂಚನೆ ಪ್ರಶ್ನಿಸಿರುವ ಅರ್ಜಿ ಇಂದೇ ವಿಚಾರಣೆ: ಸುಪ್ರೀಂ ಅಸ್ತು

Last Updated 29 ಜೂನ್ 2022, 6:20 IST
ಅಕ್ಷರ ಗಾತ್ರ

ನವದೆಹಲಿ: ಮಹಾರಾಷ್ಟ್ರದ ಮಹಾ ವಿಕಾಸ ಆಘಾಡಿ ಸರ್ಕಾರಕ್ಕೆ ಬಹುಮತ ಸಾಬೀತು ಪಡಿಸುವಂತೆ ರಾಜ್ಯಪಾಲರ ಸೂಚನೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯನ್ನು ಬುಧವಾರ ಸಂಜೆ 5 ಗಂಟೆಗೆ ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್‌ ಹೇಳಿದೆ.

ರಾಜ್ಯಪಾಲ ಭಗತ್‌ಸಿಂಗ್‌ ಕೋಶಿಯಾರಿ ಅವರು ಮಹಾರಾಷ್ಟ್ರ ಸರ್ಕಾರಕ್ಕೆ ಜೂನ್‌ 30ರಂದು ಬೆಳಿಗ್ಗೆ 11 ಗಂಟೆಗೆ ಬಹುಮತ ಸಾಬೀತು ಪಡಿಸುವಂತೆ ಸೂಚಿಸಿದ್ದಾರೆ. ಇದನ್ನು ಪ್ರಶ್ನಿಸಿ ಶಿವಸೇನಾದ ಮುಖ್ಯ ಸಚೇತಕ ಸುನೀಲ್‌ ಪ್ರಭು ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಹಿರಿಯ ವಕೀಲ ಅಭಿಷೇಕ್‌ ಮನು ಸಿಂಘ್ವಿ ಅವರು ಶಿವಸೇನಾ ಸಲ್ಲಿಸಿರುವ ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸುವಂತೆ ನ್ಯಾಯಮೂರ್ತಿ ಸೂರ್ಯ ಕಾಂತ್‌ ಅವರ ನೇತೃತ್ವದ ಪೀಠಕ್ಕೆ ಮನವಿ ಮಾಡಿದರು. ಇಂದು ಸಂಜೆ 5 ಗಂಟೆಗೆ ಅರ್ಜಿಯನ್ನು ಕೈಗೆತ್ತಿಕೊಳ್ಳುವುದಾಗಿ ನ್ಯಾ. ಸೂರ್ಯಕಾಂತ್‌ ಅವರು ತಿಳಿಸಿದರು.

ಬಂಡಾಯ ಶಾಸಕರ ಪರ ವಕೀಲ ನೀರಜ್‌ ಕಿಶನ್‌ ಪೌಲ್‌ ಅವರು ಸಿಂಘ್ವಿ ಅವರ ಮನವಿಯನ್ನು ಸ್ವೀಕರಿಸದಿರುವಂತೆ ಕೋರ್ಟ್‌ಗೆ ಒತ್ತಾಯಿಸಿದರು. ಈ ಅರ್ಜಿಯನ್ನು ಗುರುವಾರ ಕೈಗೆತ್ತಿಕೊಳ್ಳುವಂತೆ ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT