ದೆಹಲಿಯಂತೆ ಹರಿಯಾಣದಲ್ಲೂ ಶಾಲೆ, ಆಸ್ಪತ್ರೆ ಅಭಿವೃದ್ಧಿ: ಕೇಜ್ರಿವಾಲ್

ಕುರುಕ್ಷೇತ್ರ, ಹರಿಯಾಣ: ರಾಷ್ಟ್ರ ರಾಜಧಾನಿ ದೆಹಲಿಯಂತೆ ಹರಿಯಾಣದಲ್ಲಿಯೂ ಸರ್ಕಾರಿ ಶಾಲೆ ಮತ್ತು ಆಸ್ಪತ್ರೆಗಳನ್ನು ಅಭಿವೃದ್ಧಿಗೊಳಿಸುವುದಾಗಿ ಎಎಪಿ ರಾಷ್ಟ್ರೀಯ ಸಂಚಾಲಕ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಭರವಸೆ ನೀಡಿದರು.
ಭಾನುವಾರ ಕುರುಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷದ ಮೊದಲ ರಾಜ್ಯಮಟ್ಟದ ರ್ಯಾಲಿ ಉದ್ದೇಶಿಸಿದ ಮಾತನಾಡಿದ ಕೇಜ್ರಿವಾಲ್, ಮುಂದಿನ ತಿಂಗಳು ನಡೆಯುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷಕ್ಕೆ ಬೆಂಬಲ ನೀಡುವಂತೆ ಜನರಲ್ಲಿ ಮನವಿ ಮಾಡಿದರು.
ಮೂರೇ ತಿಂಗಳಲ್ಲಿ ಕನ್ನಡ ಕಲಿತ ಕರ್ನಾಟಕದ ಕಲ್ಪನಾ ಸಾಧನೆಗೆ ಮೋದಿ ಮೆಚ್ಚುಗೆ
ಪಂಜಾಬ್ನಲ್ಲಿ ಭ್ರಷ್ಟಾಚಾರ ಪ್ರಕರಣದಲ್ಲಿ ವಿಜಯ್ ಸಿಂಗ್ಲಾ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿದ್ದನ್ನು ಉಲ್ಲೇಖಿಸಿ, ‘ದೆಹಲಿ ಮತ್ತು ಪಂಜಾಬ್ನಲ್ಲಿ ಭ್ರಷ್ಟಾಚಾರಕ್ಕೆ ಅಂತ್ಯ ಹಾಡಿದ್ದೇವೆ. ಹರಿಯಾಣದಲ್ಲೂ ಭ್ರಷ್ಟಾಚಾರ ತೊಲಗಿಸುತ್ತೇವೆ’ ಎಂದು ಹೇಳಿದರು.
2024ರ ಚುನಾವಣೆಯಲ್ಲಿ ಹರಿಯಾಣದಲ್ಲಿ ಆಮ್ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ ದೆಹಲಿಯಂತೆ 24 ಗಂಟೆ ವಿದ್ಯುತ್ ನೀಡುವುದಾಗಿ ಆಶ್ವಾಸನೆ ನೀಡಿದರು.
ಇದೇ ವೇಳೆ, ಸರ್ಕಾರಿ ನೇಮಕಾತಿಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳನ್ನು ಉಲ್ಲೇಖಿಸಿ ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.