ನವದೆಹಲಿ: 'ಉದ್ಯಮಿ ಗೌತಮ್ ಅದಾನಿ ಮತ್ತು ನಿಖಿಲ್ ಮರ್ಚೆಂಟ್‌ಗೆ ಹೊಸ ಸಂಸತ್ ಭವನದಲ್ಲಿ ವಿಶೇಷ ಕೊಠಡಿಗಳೇನಾದರೂ ಇವೆಯೇ' ಎಂದು ಕೇಳುವ ಮೂಲಕ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಗೇಲಿ ಮಾಡಿದ್ದಾರೆ.
ದೆಹಲಿಯಲ್ಲಿ ನಿರ್ಮಾಣಗೊಂಡಿರುವ ಹೊಸ ಸಂಸತ್ ಭವನಕ್ಕೆ ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ದಿಢೀರ್ ಭೇಟಿ ನೀಡಿದ್ದರು. ಕಾಮಗಾರಿ ಪರಿಶೀಲನೆ ನಡೆಸುತ್ತಿದ್ದ ಮೋದಿ ಅವರ ಫೋಟೊ, ವಿಡಿಯೊಗಳು ಈಗಾಗಲೇ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ.
ಇದೇ ಹಿನ್ನೆಲೆಯಲ್ಲಿ ಶನಿವಾರ ಟ್ವೀಟ್ ಮಾಡಿರುವ ಮಹುವಾ, ‘ನಮ್ಮ ಹೊಸ ಸಂಸತ್ತಿನಲ್ಲಿ ಅದಾನಿ, ನಿಖಿಲ್ ಮರ್ಚೆಂಟ್‌ಗೆ ವಿಶೇಷ ಕೊಠಡಿಗಳೇನಾದರೂ ಇವೆಯೇ? ಬಿಜೆಪಿಗೆ ಪಕ್ಷಾಂತರಗೊಳ್ಳುವ ನಾಯಕರಿಗೆ ನೆಲಮಾಳಿಗೆಯಲ್ಲಿ ವಾಷಿಂಗ್ ಮೆಷಿನ್ ಕೊಠಡಿ ಇದೆಯೇ? ಎಂದು ಪ್ರಶ್ನೆ ಮಾಡಿ ಕುಹಕವಾಡಿದ್ದಾರೆ.
ಪಶ್ಚಿಮ ಬಂಗಾಳದ ನಾದಿಯಾ ಜಿಲ್ಲೆಯ ಕೃಷ್ಣನಗರ ಲೋಕಸಭಾ ಕ್ಷೇತ್ರದ ಟಿಎಂಸಿ ಸಂಸದೆಯಾಗಿರುವ ಮಹುವಾ, ಟ್ವಿಟರ್ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಸಕ್ರಿಯ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಸದಾ ಟೀಕೆಗೆ ಗುರಿಪಡಿಸುವ ಅವರು, ಸಂಸತ್ತಿನಲ್ಲಿಯೂ ತರಾಟೆಗೆ ತೆಗೆದುಕೊಂಡ ಹಲವು ನಿದರ್ಶನಗಳಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.