ಗುರುವಾರ , ಡಿಸೆಂಬರ್ 1, 2022
20 °C

ಸುಳ್ಳು ಸುದ್ದಿ ವಿರುದ್ಧ ಕಾನೂನು ಕ್ರಮ: ಕಾಂಗ್ರೆಸ್‌

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ‘ಭಾರತ್ ಜೋಡೋ ಯಾತ್ರೆ’ಯ ವಿರುದ್ಧ ಬಿಜೆಪಿ ನಾಯಕರು ಸುಳ್ಳು ಮತ್ತು ವಿಭಜಕತೆಯನ್ನು ಉಂಟು ಮಾಡುವ ಸುದ್ದಿ ಹರಡುತ್ತಿದ್ದು, ಈ ಸಂಬಂಧ ಐದು ಪ್ರಕರಣಗಳಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಸೋಮವಾರ ಹೇಳಿದ್ದಾರೆ.

ಕೇರಳದ ಸಂಸದ ಹೈಬಿ ಈಡನ್‌ ಅವರು ಪೊಲೀಸರಿಗೆ ನೀಡಿರುವ ದೂರಿನ ಪ್ರತಿಯನ್ನು ಜೈರಾಮ್‌ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಪೋಸ್ಟ್‌ ಮಾಡಲಾಗಿದೆ ಎಂದು ಹೈಬಿ ಈಡನ್‌ ಅವರು ದೂರಿನಲ್ಲಿ ಆರೋಪಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು