ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನಿ ಎಂದಾದರೂ ಸಂಸತ್ ಚರ್ಚೆಯಲ್ಲಿ ಭಾಗವಹಿಸುತ್ತಾರೆಯೇ? ಚಿದಂಬರಂ ಟೀಕೆ

Last Updated 18 ನವೆಂಬರ್ 2021, 9:33 IST
ಅಕ್ಷರ ಗಾತ್ರ

ನವದೆಹಲಿ: ಸಂಸತ್ ಅಧಿವೇಶನದಲ್ಲಿ ಮೌಲ್ಯಯುತ ಚರ್ಚೆಗೆ ಆದ್ಯತೆ ಕೊಡಬೇಕು ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಯನ್ನು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ ನಾಯಕ ಪಿ. ಚಿದಂಬರಂ, ಪ್ರಧಾನಿ ಎಂದಾದರೂ ಸಂಸತ್ ಚರ್ಚೆಯಲ್ಲಿ ಭಾಗವಹಿಸುತ್ತಾರೆಯೇ ಎಂದು ತಿರುಗೇಟು ನೀಡಿದ್ದಾರೆ.

ಸಂಸತ್ ಅಧಿವೇಶನದಲ್ಲಿ ಗುಣಮಟ್ಟದ ಚರ್ಚೆಗೆ ಪ್ರತ್ಯೇಕ ಸಮಯವನ್ನು ಕಲ್ಪಿಸುವ ಮಹತ್ವದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದರು.

'ಸಂಸತ್ತಿನಲ್ಲಿ ಗುಣಮಟ್ಟದ ಚರ್ಚೆಗಳ ಅಗತ್ಯವಿದೆ ಎಂದು ಪ್ರಧಾನಿ ಒತ್ತಿ ಹೇಳಿರುವುದು ಆಸಕ್ತಿದಾಯಕವಾಗಿದೆ. ಗುಣಮಟ್ಟದ ಚರ್ಚೆಗಳಿಗಾಗಿ ಪ್ರತ್ಯೇಕ ಸಮಯವನ್ನು ನಿಗದಿ ಮಾಡುವಂತೆಯೂ ಸಲಹೆ ಮಾಡಿದ್ದಾರೆ. ಆದರೆ ಈಗ ಉದ್ಭವಿಸಿರುವ ಪ್ರಶ್ನೆ ಏನೆಂದರೆ ಸಂಸತ್ತಿನಲ್ಲಿ ಪ್ರಧಾನಿ ಎಂದಾದರೂ ಚರ್ಚೆಯಲ್ಲಿ ಭಾಗವಹಿಸುತ್ತಾರೆಯೇ' ಎಂದು ಚಿದಂಬರಂ ಟ್ವೀಟ್ ಮಾಡಿದ್ದಾರೆ.

ಸಂಸತ್ತಿನಲ್ಲಿ ಪ್ರಮುಖ ವಿಷಯಗಳ ಚರ್ಚೆಯಿಂದ ಸರ್ಕಾರ ಪಾಲಾಯನ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಅತ್ತ ವಿರೋಧ ಪಕ್ಷಗಳು ಸದನದ ಕಾರ್ಯಕಲಾಪಕ್ಕೆ ಅಡ್ಡಿಯಾಗುತ್ತಿದೆ ಎಂದು ಕೇಂದ್ರ ಸರ್ಕಾರವು ಆರೋಪಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT