ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೂನ್ 15ರೊಳಗೆ ರಾಜ್ಯಗಳಿಗೆ 5.86 ಕೋಟಿ ಲಸಿಕೆ: ಕೇಂದ್ರ ಸರ್ಕಾರ

Last Updated 19 ಮೇ 2021, 14:27 IST
ಅಕ್ಷರ ಗಾತ್ರ

ನವದೆಹಲಿ: ಜೂನ್ 15ರ ಹೊತ್ತಿಗೆ ರಾಜ್ಯಗಳಿಗೆ 5.86 ಕೋಟಿ ಲಸಿಕೆಗಳನ್ನು ಒದಗಿಸಲಾಗುವುದು ಎಂದು ಕೇಂದ್ರ ಸರ್ಕಾರವು ಬುಧವಾರ ತಿಳಿಸಿದೆ.

ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ದೂರವಾಣಿ ಮೂಲಕ ಪ್ರತಿಕ್ರಿಯೆ ಪಡೆದ ಬಳಿಕ ಕೇಂದ್ರ ಸರ್ಕಾರವು ರಾಜ್ಯಗಳಿಗೆ ಮುಂಚಿತವಾಗಿ ಲಸಿಕೆ ನೀಡುವ ತೀರ್ಮಾನ ಕೈಗೊಂಡಿದೆ.

‘ಕೇಂದ್ರಾಡಳಿತ ಪ್ರದೇಶಗಳು ಮತ್ತು ರಾಜ್ಯಗಳಿಗೆ ಮೇ 1ರಿಂದ ಜೂನ್ 15ರೊಳಗೆ ಒಟ್ಟು 5,86,29,000 ಲಸಿಕೆಗಳನ್ನು ಉಚಿತವಾಗಿ ಒದಗಿಸಲಾಗುವುದು. ಲಸಿಕಾ ಉತ್ಪಾದಕ ಕಂಪನಿಗಳಿಂದ ದೊರೆತ ಮಾಹಿತಿಯ ಪ್ರಕಾರ ಜೂನ್ ಕೊನೆಯ ವೇಳೆಗೆ ಹೆಚ್ಚುವರಿಯಾಗಿ 4,87,55,000 ಲಸಿಕೆಗಳು ಲಭ್ಯವಾಗಲಿವೆ’ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಮಾಹಿತಿ ನೀಡಿದೆ.

ಲಸಿಕೆಗಳನ್ನು ನೀಡಲು ಜಿಲ್ಲಾವಾರು, ಕೋವಿಡ್ ವ್ಯಾಕ್ಸಿನೇಷನ್ ಸೆಂಟರ್ (ಸಿವಿಸಿ) ಯೋಜನೆಯನ್ನು ಸಿದ್ಧಪಡಿಸಬೇಕು ಮತ್ತು ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಲು ಲಸಿಕೆಯ ಕುರಿತು ಪ್ರಚಾರ ಮಾಡಬೇಕು ಎಂದು ರಾಜ್ಯಗಳಿಗೆ ಸಚಿವಾಲಯವು ನಿರ್ದೇಶನ ನೀಡಿದೆ.

‘ಆಯಾ ರಾಜ್ಯ ಸರ್ಕಾರಗಳು ಮತ್ತು ಖಾಸಗಿ ಲಸಿಕಾ ಕೇಂದ್ರಗಳು ಕೋವಿನ್ ಡಿಜಿಟಿಲ್ ವೇದಿಕೆಯಲ್ಲಿ ತಮ್ಮ ಲಸಿಕಾ ಕ್ಯಾಲೆಂಡರ್‌ ಅನ್ನು ಮುಂಚಿತವಾಗಿಯೇ ಪ್ರಕಟಿಸಬೇಕು. ಲಸಿಕಾ ಕೇಂದ್ರಗಳಲ್ಲಿ ಜನಸಂದಣಿ ಆಗದಂತೆ ಎಚ್ಚರಿಕೆ ವಹಿಸಬೇಕು’ ಎಂದೂ ಸಚಿವಾಲಯವು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT