ಆರೋಪ ಸಾಬೀತಾದರೆ ನೇಣಿಗೆ ಶರಣು: ಅಭಿಷೇಕ್ ಬ್ಯಾನರ್ಜಿ ಸವಾಲು

ಕುಲ್ತಾಲಿ (ಪಶ್ಚಿಮ ಬಂಗಾಳ): ಕುಟುಂಬದಲ್ಲಿ ಒಬ್ಬ ಸದಸ್ಯರಿಗೆ ಮಾತ್ರವೇ ರಾಜಕೀಯದಲ್ಲಿ ಅವಕಾಶ ಎಂಬ ಕಾನೂನನ್ನು ಕೇಂದ್ರ ಜಾರಿಗೊಳಿಸಿದರೆ ಖಂಡಿತವಾಗಿಯೂ ರಾಜಕೀಯ ತೊರೆಯುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರ ಸಂಬಂಧಿ ಅಭಿಷೇಕ್ ಬ್ಯಾನರ್ಜಿ ಭಾನುವಾರ ತಿಳಿಸಿದ್ದಾರೆ.
ಬಿಜೆಪಿಯಲ್ಲಿನ ತಮ್ಮ ವಿರೋಧಿಗಳಿಗೆ ನೇರವಾಗಿ ಸವಾಲು ಹಾಕಿರುವ ತೃಣಮೂಲ ಕಾಂಗ್ರೆಸ್ ಮುಖಂಡ ಅಭಿಷೇಕ್, ‘ನನ್ನ ಮೇಲಿರುವ ಭ್ರಷ್ಟಾಚಾರ ಆರೋಪಗಳನ್ನು ಸಾಬೀತುಪಡಿಸಿದರೆ, ಸಾರ್ವಜನಿಕವಾಗಿ ನೇಣಿಗೆ ಶರಣಾಗುತ್ತೇನೆ’ ಎಂದು ಹೇಳಿದ್ದಾರೆ.
ಕುಲ್ತಲಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕುಟುಂಬದ ಒಂದಕ್ಕಿಂತ ಹೆಚ್ಚು ಸದಸ್ಯರನ್ನು ಸಕ್ರಿಯ ರಾಜಕೀಯದಿಂದ ನಿಷೇಧಿಸುವ ಮಸೂದೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಂಡಿಸಬೇಕು. ಹೀಗಾದರೆ, ಮರು ಕ್ಷಣದಿಂದಲೇ ಬ್ಯಾನರ್ಜಿ ರಾಜಕೀಯ ರಂಗದಲ್ಲಿ ಇರುವುದಿಲ್ಲ ಎಂದಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.