ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್‌ನಲ್ಲಿ ಅಧಿಕಾರಕ್ಕೆ ಬಂದರೆ ಪಿಂಚಣಿ ಮರುಜಾರಿ: ರಾಹುಲ್‌ ಗಾಂಧಿ ಭರವಸೆ

Last Updated 20 ಸೆಪ್ಟೆಂಬರ್ 2022, 6:22 IST
ಅಕ್ಷರ ಗಾತ್ರ

ನವದೆಹಲಿ: ಗುಜರಾತ್‌ನಲ್ಲಿ ಪಿಂಚಣಿ ಯೋಜನೆಯನ್ನು ಬಿಜೆಪಿ ಕೈಬಿಡುವ ಮೂಲಕ ಸ್ವಾವಲಂಬಿ ಹಿರಿಯ ನಾಗರಿಕರನ್ನು ಅವಲಂಬಿತರನ್ನಾಗಿಸಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅರೋಪಿಸಿದ್ದಾರೆ.

ಗುಜರಾತ್‌ನಲ್ಲಿ ಅಧಿಕಾರಕ್ಕೆ ಕಾಂಗ್ರೆಸ್‌ ಅನ್ನು ಆಯ್ಕೆ ಮಾಡಿದರೆ ಹಳೆಯ ಪಿಂಚಣಿ ಯೋಜನೆಯನ್ನು ಮರುಜಾರಿಗೊಳಿಸಲಾಗುವುದು. ರಾಷ್ಟ್ರವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ದುಡಿದ ಸರ್ಕಾರಿ ನೌಕರರು ಪಿಂಚಣಿ ಪಡೆಯುವುದು ಹಕ್ಕಾಗಿದೆ ಎಂದು ರಾಹುಲ್‌ ಗಾಂಧಿ ಪ್ರತಿಪಾದಿಸಿದ್ದಾರೆ.

ರಾಜಸ್ಥಾನ ಮತ್ತು ಛತ್ತೀಸಢಡದಲ್ಲಿ ಹಳೆಯ ಪಿಂಚಣಿ ಯೋಜನೆಯನ್ನು ಮರುಜಾರಿಗೆ ತಂದಿದ್ದೇವೆ. ಈಗ ಗುಜರಾತ್‌ನಲ್ಲಿ ಕಾಂಗ್ರೆಸ್‌ ಅಧಿಕಾರ ಹಿಡಿದರೆ ಪಿಂಚಣಿ ಯೋಜನೆಯನ್ನು ಪುನಃ ಜಾರಿಗೆ ತರುತ್ತೇವೆ ಎಂದು #CongressDegiOldPension ಹ್ಯಾಶ್‌ಟ್ಯಾಗ್‌ ಅಡಿ ಟ್ವೀಟ್‌ ಮಾಡಿದ್ದಾರೆ.

ಗುಜರಾತ್‌ ಕಾಂಗ್ರೆಸ್‌ನ ಹಿರಿಯ ಮುಖಂಡ ಅರ್ಜುನ್‌ ಮೊಧವಾಡಿಯಾ ಅವರು ಪಿಂಚಣಿ ಯೋಜನೆಯನ್ನು ಮರುಜಾರಿ ಮಾಡುವುದಾಗಿ ಭರವಸೆ ನೀಡಿದ್ದಾರೆ. ಇತ್ತೀಚೆಗೆ ಸಾವಿರಾರು ನಿವೃತ್ತ ಸರ್ಕಾರಿ ನೌಕರರು ಹಳೆಯ ಪಿಂಚಣಿ ಯೋಜನೆಯನ್ನು ಮರುಜಾರಿ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT