ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉ.ಪ್ರದೇಶ - ಲೋಕಸಭಾ ಚುನಾವಣೆಯಲ್ಲಿ ಎಲ್ಲಾ 80 ಸ್ಥಾನ ಗೆಲ್ಲಲಿದ್ದೇವೆ: ಬಿಜೆಪಿ

Last Updated 22 ಜನವರಿ 2023, 15:48 IST
ಅಕ್ಷರ ಗಾತ್ರ

ಲಖನೌ: ‘ಮೋದಿ ಹೈ ತೊ ಮಮ್ಕಿನ್‌ ಹೈ (ಮೋದಿ ಇದ್ದರೆ ಎಲ್ಲವೂ ಸಾಧ್ಯ) ಎಂಬುದು ಜಗತ್ತಿನ ಘೋಷಣೆಯಾಗಿದೆ’ ಎಂದು ಉತ್ತರ ‍ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಭಾನುವಾರ ಇಲ್ಲಿ ನಡೆದ ರಾಜ್ಯ ಬಿಜೆಪಿ ಕಾರ್ಯಕಾರಿ ಸಭೆಯಲ್ಲಿ ಹೇಳಿದರು. ಈ ಮೂಲಕ 2024ರ ಲೋಕಸಭಾ ಚುನಾವಣೆಯು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆಯಲಿದೆ ಎಂಬ ಸುಳಿವು ನೀಡಿದರು.

ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ಸಾಧನೆಗಳನ್ನು ಪಟ್ಟಿ ಮಾಡಿದ ಅವರು, ಜಿ20ಯ ಅಧ್ಯಕ್ಷತೆ ಭಾರತಕ್ಕೆ ಸಿಕ್ಕಿರುವುದು, ದೇಶದ ಆರ್ಥಿಕತೆಯಲ್ಲಿ ಬೆಳವಣಿಗೆ ಕಾಣುತ್ತಿರುವುದು ಮೋದಿ ಅವರ ಆಡಳಿತದಲ್ಲಿ ಎಲ್ಲವೂ ಸಾಧ್ಯ ಎಂಬುದಕ್ಕೆ ನಿದರ್ಶನ ಎಂದರು.

ಮುಂಬರಲಿರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯು ರಾಜ್ಯದಲ್ಲಿ ಎಲ್ಲಾ 80 ಸ್ಥಾನಗಳನ್ನೂ ಗೆಲ್ಲಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಭೂಪೇಂದ್ರ ಚೌಧರಿ ಈ ವೇಳೆ ಹೇಳಿದರು.

ಬಿಜೆಪಿ ಶೂನ್ಯ ಸಂಪಾದಿಸಲಿದೆ: ಬಿಜೆಪಿಯ ಹೇಳಿಕೆಗೆ ಭಿನ್ನವಾದ ಹೇಳಿಕೆಯನ್ನು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಅವರು ನೀಡಿದ್ದಾರೆ. 2024 ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಎಲ್ಲಾ ಸ್ಥಾನಗಳನ್ನೂ ಕಳೆದುಕೊಳ್ಳಲಿದೆ ಎಂದಿದ್ದಾರೆ.

ಬಿಜೆಪಿಯು ಉದ್ಯಮಿಗಳ ಪರವಾಗಿ, ಖಾಸಗೀಕರಣದ ಪರವಾಗಿ ಕೆಲಸ ಮಾಡುತ್ತಿದೆ. ಬೆಲೆ ಏರಿಕೆ ಜನರ ಕಂಗೆಡಿಸಿದೆ ಎಂದು ಅಖಿಲೇಶ್‌ ಭಾನುವಾರ ಸುದ್ದಿಗಾರರ ಎದುರು ಹೇಳಿದರು.

ಪೊಲೀಸ್‌ ಬಂಧನದಲ್ಲಿರುವಾಗಿನ ಹತ್ಯೆ ಪ್ರಕರಣಗಳು ಹೆಚ್ಚಾಗಿವೆ. ಈ ಬಗ್ಗೆ ತಿಳಿಯಲು ಪಕ್ಷದ ನಾಯಕರು ವೈದ್ಯಕೀಯ ಕಾಲೇಜುಗಳಿಗೆ ತೆರಳಿ ಪರಿಶೀಲನೆ ನಡೆಸಬೇಕು. ಆಗ ಬಿಜೆಪಿ ಎಷ್ಟು ಸ್ಥಾನಗಳನ್ನು ಗೆಲ್ಲಲಿದೆ ಎಂದು ನಾಯಕರಿಗೆ ಮನವರಿಕೆಯಾಗುತ್ತದೆ ಎಂದರು.

ಬಿಜೆಪಿಗೆ ದಿನಗಣನೆ ಆರಂಭವಾಗಿದೆ. ಇನ್ನು 398 ದಿನಗಳು ಮಾತ್ರ ಬಾಕಿ ಇವೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT