ಸೋಮವಾರ, ಸೆಪ್ಟೆಂಬರ್ 27, 2021
21 °C

ಪಂಜಾಬ್‌ನಲ್ಲಿ ಕಾಂಗ್ರೆಸ್‌ ಕೋಟೆಯನ್ನು ಇನ್ನಷ್ಟು ಸದೃಢಗೊಳಿಸೋಣ: ಸಿಧು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಚಂಡೀಗಡ: ತಮ್ಮನ್ನು ಪಂಜಾಬ್‌ ಕಾಂಗ್ರೆಸ್‌ ಘಟಕದ ಅಧ್ಯಕ್ಷರನ್ನಾಗಿ ನೇಮಿಸಿದ ‍ಸೋನಿಯಾ ಗಾಂಧಿ ಅವರಿಗೆ ಕಾಂಗ್ರೆಸ್‌ ನಾಯಕ ನವಜೋತ್‌ ಸಿಂಗ್‌ ಸಿಧು ಅವರು ಕೃತಜ್ಞತೆ ಸಲ್ಲಿಸಿದರು.

ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಭಾನುವಾರ ರಾತ್ರಿ ನವಜೋತ್‌ ಸಿಂಗ್‌ ಸಿಧು ಅವರನ್ನು ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ (ಪಿಪಿಸಿಸಿ) ಮುಖ್ಯಸ್ಥರಾಗಿ ನೇಮಿಸಿದರು.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು,‘ಪಕ್ಷದ ಕನಸನ್ನು ನನಸಾಗಿಸಲು ನಾನು ಶ್ರಮಿಸುತ್ತೇನೆ. ನನ್ನ ಮೇಲೆ ನಂಬಿಕೆಯಿಟ್ಟು ಈ ಜವಾಬ್ದಾರಿಯನ್ನು ನೀಡಿದ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ, ನಾಯಕರಾದ ರಾಹುಲ್‌ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರಿಗೆ ಧನ್ಯವಾದಗಳು’ ಎಂದಿದ್ದಾರೆ.

‘ಜಿತೇಗಾ ಪಂಜಾಬ್‌’ ಮಿಷನ್‌ ಅನ್ನು ಪೂರ್ಣಗೊಳಿಸಲು ಕಾಂಗ್ರೆಸ್‌ ಕುಟುಂಬದ ಪ್ರತಿಯೊಬ್ಬ ಸದಸ್ಯರು ಜತೆಗೂಡಿ ಕೆಲಸ ಮಾಡಲಿದ್ದಾರೆ. ಕಾಂಗ್ರೆಸ್‌ನ 18 ಅಜೆಂಡಾಗಳ ಮೂಲಕ ಜನರಿಗೆ ಅವರ ಶಕ್ತಿಯನ್ನು ವಾಪಾಸ್‌ ನೀಡೋಣ. ನನ್ನ ಪಯಣ ಈಗಷ್ಟೇ ಪ್ರಾರಂಭವಾಗಿದೆ’ ಎಂದು ಅವರು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು