ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಹಾರ ವಿಧಾನಸಭೆಗೆ ಆಯ್ಕೆಯಾದವರ ಪೈಕಿ ಶೇ.68 ಮಂದಿ ಅಪರಾಧ ಹಿನ್ನೆಲೆಯವರು

Last Updated 11 ನವೆಂಬರ್ 2020, 14:34 IST
ಅಕ್ಷರ ಗಾತ್ರ

ನವದೆಹಲಿ: ಬಿಹಾರ ವಿಧಾನಸಭೆಗೆ ಆಯ್ಕೆಯಾದವರ ಪೈಕಿ ಶೇ.68 ಮಂದಿ ಅಪರಾಧ ಹಿನ್ನೆಲೆ ಹೊಂದಿದ್ದಾರೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ತಿಳಿಸಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಸಂಸ್ಥೆಯು, 'ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿರುವವರ ಪೈಕಿ ಶೇ.68 ಮಂದಿ ಅಪರಾಧ ಹಿನ್ನೆಲೆ ಹೊಂದಿದ್ದಾರೆ ಮತ್ತು ಶೇ. 81 ಜನರು ಕೋಟ್ಯಾಧಿಪತಿಗಳಾಗಿದ್ದಾರೆ' ಎಂದು ಹೇಳಿದೆ.

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ, ಜೆಡಿಯು ನೇತೃತ್ವದ ಎನ್‌ಡಿಎ 125 ಕ್ಷೇತ್ರಗಳಲ್ಲಿ ಗೆಲುವು ಪಡೆದಿದೆ. ಆರ್‌ಜೆಡಿ ನೇತೃತ್ವದ ಮಹಾಗಠಬಂಧನ 110 ಸ್ಥಾನಗಳನ್ನು ತನ್ನದಾಗಿಸಿಕೊಂಡಿದೆ. ಆದರೆ, 75 ಸ್ಥಾನಗಳಲ್ಲಿ ಗೆಲುವು ಪಡೆಯವ ಮೂಲಕ ಆರ್‌ಜೆಡಿಯು ಏಕೈಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT