ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್ಲರೂ ಹೆಣಗಾಡುತ್ತಿರುವಾಗ ಅದಾನಿ ಸಂಪತ್ತು ಶೇ.50ರಷ್ಟು ವೃದ್ಧಿ ಹೇಗೆ? ರಾಹುಲ್

Last Updated 13 ಮಾರ್ಚ್ 2021, 12:28 IST
ಅಕ್ಷರ ಗಾತ್ರ

ನವದೆಹಲಿ: ಕೋವಿಡ್-19 ಸಾಂಕ್ರಾಮಿಕ ರೋಗದ ಅತ್ಯಂತ ಕಠಿಣ ಸಮಯದಲ್ಲಿ ಎಲ್ಲರೂ ಹೆಣಗಾಡುತ್ತಿರುವಾಗ ಉದ್ಯಮಿ ಗೌತಮ್ ಅದಾನಿ ಸಂಪತ್ತನ್ನು ಹೇಗೆ ನಿರೀಕ್ಷೆಗೂ ಮೀರಿ ಹೆಚ್ಚಿಸಿಕೊಂಡರು ಎಂದು ಕಾಂಗ್ರೆಸ್ ನೇತಾರ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಬ್ಲೂಮ್‌ಬರ್ಗ್ ವರದಿಯೊಂದನ್ನು ಉಲ್ಲೇಖಿಸಿ ರಾಹುಲ್ ಗಾಂಧಿ ಆರೋಪ ಮಾಡಿದ್ದಾರೆ. 2021ರಲ್ಲಿ ಸಂಪತ್ತು ಗಳಿಕೆಯಲ್ಲಿ ಇಡೀ ವಿಶ್ವದಲ್ಲೇ ಮುಂಚೂಣಿಯಲ್ಲಿರುವ ಅದಾನಿ ₹12 ಲಕ್ಷ ಕೋಟಿ ರೂ. ಗಳಿಕೆಪಡೆದಿದ್ದಾರೆ. ಇದರೊಂದಿಗೆ ಒಟ್ಟು ನಿವ್ವಳ ಆಸ್ತಿಮೌಲ್ಯ 50 ಬಿಲಿಯನ್ ಅಮೆರಿಕನ್ ಡಾಲರ್‌ಗೆ ಏರಿಕೆ ಕಂಡಿದೆ.

ಎಲ್ಲರೂ ಹೆಣಗಾಡುತ್ತಿರುವಾಗ ಉದ್ಯಮಿ ಗೌತಮ್ ಅದಾನಿ ತಮ್ಮ ಸಂಪತ್ತನ್ನು ಶೇಕಡಾ 50ರಷ್ಟು ಹೆಚ್ಚಿಸಿಕೊಳ್ಳಲು ಹೇಗೆ ಸಾಧ್ಯವಾಯಿತು ಎಂದು ರಾಹುಲ್ ಪ್ರಶ್ನಿಸಿದರು.

ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, 2020ರಲ್ಲಿ ನಿಮ್ಮ ಸಂಪತ್ತು ಎಷ್ಟು ಹೆಚ್ಚಾಗಿದೆ? ಶೂನ್ಯ. ನೀವು ಬದುಕಲು ಹೆಣಗಾಡುತ್ತೀರಿ. ಆದರೆ ಅವರು (ಅದಾನಿ) ₹12 ಲಕ್ಷ ಕೋಟಿ ರೂ. ಗಳಿಕೆ ಪಡೆದು ತಮ್ಮ ಸಂಪತನ್ನು ಶೇಕಡಾ 50ರಷ್ಟು ಹೆಚ್ಚಿಸಿಕೊಂಡಿದ್ದಾರೆ. ಇದು ಏಕೆ ಎಂದು ಹೇಳಬಲ್ಲೀರಾ? ಎಂದು ಪ್ರಶ್ನೆ ಮಾಡಿದ್ದಾರೆ.

ವರದಿಯ ಪ್ರಕಾರ, ಸಂಪತ್ತು ಗಳಿಕೆಯಲ್ಲಿ ವಿಶ್ವದಲ್ಲೇ ಅದಾನಿ ಮುಂಚೂಣಿಯಲ್ಲಿ ಗುರುತಿಸಿದ್ದಾರೆ. ಈ ಪಟ್ಟಿಯಲ್ಲಿ ಅಮೆಜಾನ್ ಸಂಸ್ಥಾಪಕ ಹಾಗೂ ಸಿಇಒ ಜೆಫ್ ಬೆಜೋಸ್ ಹಾಗೂ ಟೆಸ್ಲಾ ಸಿಇಒ ಎಲನ್ ಮಸ್ಕ್ ಅವರನ್ನೇ ಹಿಂದಿಕ್ಕಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT