ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯಾಯಮೂರ್ತಿಗಳ ನೇಮಕ ವಿಳಂಬ : ‘ಸುಪ್ರೀಂ’ ಅಸಮಾಧಾನ

ಉಚ್ಚ ನ್ಯಾಯಾಲಯಗಳಿಗೆ ನೇಮಕಕ್ಕೆ ಕೊಲಿಜಿಯಂನಿಂದ ಶಿಫಾರಸು
Last Updated 11 ನವೆಂಬರ್ 2022, 12:40 IST
ಅಕ್ಷರ ಗಾತ್ರ

ನವದೆಹಲಿ: ಉಚ್ಚ ನ್ಯಾಯಾಲಯಗಳಿಗೆ ನೇಮಕ ಮಾಡುವ ಸಂಬಂಧ ಶಿಫಾರಸು ಮಾಡಲಾಗಿರುವ ನ್ಯಾಯಮೂರ್ತಿಗಳ ಹೆಸರುಗಳ ಕುರಿತುಕೇಂದ್ರ ಸರ್ಕಾರ ತ್ವರಿತವಾಗಿ ತೀರ್ಮಾನ ಕೈಗೊಳ್ಳದಿರುವ ಕುರಿತು ಸುಪ್ರೀಂಕೋರ್ಟ್‌ ಶುಕ್ರವಾರ ಅಸಮಾಧಾನ ವ್ಯಕ್ತಪಡಿಸಿದೆ.

‘ಕೆಲ ನ್ಯಾಯಮೂರ್ತಿಗಳ ಹೆಸರುಗಳನ್ನು ಕೊಲಿಜಿಯಂ ಪುನಃ ಶಿಫಾರಸು ಮಾಡಿದೆ. ಅಂಥವರ ನೇಮಕಾತಿ ಬಗ್ಗೆಯೂ ತೀರ್ಮಾನ ಕೈಗೊಂಡಿಲ್ಲ. ಕೇಂದ್ರದ ಈ ನಡೆಯನ್ನು ಒಪ್ಪಿಕೊಳ್ಳಲಾಗದು’ ಎಂದು ನ್ಯಾಯಮೂರ್ತಿಗಳಾದ ಎಸ್‌.ಕೆ.ಕೌಲ್‌ ಮತ್ತು ಎ.ಎಸ್‌.ಓಕಾ ಅವರಿದ್ದ ನ್ಯಾಯಪೀಠ ಹೇಳಿದೆ.

‘ನೇಮಕಾತಿಗೆ ಸಂಬಂಧಿಸಿದಂತೆ ತಮ್ಮ ಹೆಸರುಗಳನ್ನು ಅಂತಿಮಗೊಳಿಸುವಲ್ಲಿ ವಿಳಂಬ ಆಗುತ್ತಿರುವುದನ್ನು ಕಂಡು, ಶಿಫಾರಸುಗೊಂಡಿರುವ ನ್ಯಾಯಮೂರ್ತಿಗಳು ತಮ್ಮ ಒಪ್ಪಿಗೆಯನ್ನು ಹಿಂಪಡೆಯುವಂತೆ ಮಾಡಲು ಈ ವಿಳಂಬ ಧೋರಣೆಯನ್ನು ಒಂದು ಸಾಧನವಾಗಿ ಬಳಸಲಾಗುತ್ತಿದೆ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

‘ಉಚ್ಚ ನ್ಯಾಯಾಲಯಗಳಿಗೆ ಕಾಲಮಿತಿಯಲ್ಲಿ ನೇಮಕಾತಿ ಮಾಡಬೇಕು ಎಂದು ಸುಪ್ರೀಂಕೋರ್ಟ್‌ ಕಳೆದ ವರ್ಷ ಏಪ್ರಿಲ್‌ 20ರಂದು ಆದೇಶಿಸಿತ್ತು. ಆದರೆ, ಈ ಆದೇಶವನ್ನು ಉದ್ದೇಶಪೂರ್ವಕವಾಗಿ ಪಾಲನೆ ಮಾಡುತ್ತಿಲ್ಲ’ ಎಂಬ ಆರೋಪಗಳ ಬಗ್ಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಕೇಂದ್ರ ಕಾನೂನು ಸಚಿವಾಲಯದ ಕಾರ್ಯದರ್ಶಿಗೆ (ನ್ಯಾಯಾಂಗ) ನೋಟಿಸ್‌ ನೀಡಿದ ನ್ಯಾಯಪೀಠ, ವಿಚಾರಣೆಯನ್ನು ನವೆಂಬರ್ 28ಕ್ಕೆ ಮುಂದೂಡಿತು.

ಉಚ್ಚ ನ್ಯಾಯಾಲಯಗಳಿಗೆ ನ್ಯಾಯಮೂರ್ತಿಗಳ ನೇಮಕಾತಿಯಲ್ಲಿ ಆಗುತ್ತಿರುವ ವಿಳಂಬವನ್ನು ಪ್ರಶ್ನಿಸಿ ಬೆಂಗಳೂರು ವಕೀಲರ ಸಂಘ ಅರ್ಜಿ ಸಲ್ಲಿಸಿದೆ. ಸಂಘದ ಪರವಾಗಿ ವಕೀಲ ಅಮಿತ್‌ ಪೈ ವಾದ ಮಂಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT