ಗಾಂಧಿ ಕುಟುಂಬವಿಲ್ಲದೇ ಕಾಂಗ್ರೆಸ್ ಒಟ್ಟಾಗಿರಲು ಸಾಧ್ಯವಿಲ್ಲ: ಡಿ.ಕೆ ಶಿವಕುಮಾರ್

ಹೊಸದಿಲ್ಲಿ: ‘ಗಾಂಧಿ ಕುಟುಂಬವಿಲ್ಲದೆ ಕಾಂಗ್ರೆಸ್ ಒಟ್ಟಾಗಿರಲು ಸಾಧ್ಯವಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗುರುವಾರ ಹೇಳಿದ್ದಾರೆ.
ಐದು ರಾಜ್ಯಗಳ ಚುನಾವಣೆಯಲ್ಲಿನ ಹೀನಾಯ ಸೋಲಿನ ಹಿನ್ನೆಲೆಯಲ್ಲಿ ಪಕ್ಷದ ನಾಯಕತ್ವದ ವಿರುದ್ಧ ಕೇಳಿ ಬರುತ್ತಿರುವ ಟೀಕೆಗಳಿಗೆ ಡಿಕೆಶಿ ತಿರುಗೇಟು ನೀಡಿದ್ದಾರೆ. ಕೇಂದ್ರ ನಾಯಕತ್ವವನ್ನು ಸಮರ್ಥಿಸಿಕೊಂಡಿದ್ದಾರೆ.
‘ಗಾಂಧಿ ಕುಟುಂಬವಿಲ್ಲದೆ ಕಾಂಗ್ರೆಸ್ ಉಳಿಯುವುದು ಅಸಾಧ್ಯ. ಅಧಿಕಾರದ ದಾಹ ಇರುವವರು ಪಕ್ಷ ತೊರೆಯಬಹುದು. ಇನ್ನುಳಿದಿರುವ ನಮಗೆ ಅಧಿಕಾರದ ಹಪಾಹಪಿ ಇಲ್ಲ. ನಾವು ಗಾಂಧಿ ಕುಟುಂಬದೊಂದಿಗೆ ನಿಲ್ಲುತ್ತೇವೆ" ಎಂದು ಡಿಕೆಶಿ ಹೇಳಿದರು. ಈ ಬಗ್ಗೆ ಸುದ್ದಿ ಮಾಧ್ಯಮ ‘ಎನ್‌ಡಿಟಿವಿ’ ವರದಿ ಮಾಡಿದೆ.
ಕಳೆದ ಕೆಲ ವರ್ಷಗಳಿಂದ ಪಕ್ಷದಿಂದ ಹೊರಹೋಗುವವರ ಸಂಖ್ಯೆ ಹೆಚ್ಚುತ್ತಿರುವ ಕುರಿತು ಮಾತನಾಡಿರು ಅವರು, ‘ವೈಯಕ್ತಿಕ ಲಾಭ ನೋಡುವವರು ಕಾಂಗ್ರೆಸ್ ತೊರೆಯುತ್ತಿದ್ದಾರೆ. ನಾವು ಕಾಂಗ್ರೆಸ್ ಪಕ್ಷ ಮತ್ತು ಕಾಂಗ್ರೆಸ್ ಸಿದ್ಧಾಂತಕ್ಕೆ ನಿಷ್ಠರಾಗಿದ್ದೇವೆ. ಗಾಂಧಿ ಕುಟುಂಬದೊಂದಿಗೆ ಯಾವಾಗಲೂ ನಿಲ್ಲುತ್ತೇವೆ‘ ಎಂದು ಅವರು ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.