ಗುಜರಾತ್‌ನ ಪೊಲೀಸ್ ಠಾಣೆಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಯುವತಿ

ರಾಜ್‌ಕೋಟ್: ಇಲ್ಲಿನ ಪೊಲೀಸ್ ಠಾಣೆಯೊಂದರಲ್ಲಿ ವಿವಾಹಿತ ಯುವತಿ ಆತ್ಮಹತ್ಯೆಗೆ ಶರಣಾದ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ.
ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ತಮ್ಮ ಹೇಳಿಕೆಯನ್ನು ದಾಖಲಿಸಲು ಯುವತಿಯನ್ನು ಕರೆಸಲಾಗಿತ್ತು. ಆ ವೇಳೆ ಯುವತಿಯು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಕುರಿತು ರಾಜ್‌ಕೋಟ್ ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ. ರಾಜ್ಯ ಮತ್ತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೂ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.
‘ಪ‍್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆ ದಾಖಲಿಸಿಕೊಳ್ಳಲು ನಯನಾ(20) ಅವರನ್ನು ಅಜಿ ಅಣೆಕಟ್ಟು ಪೊಲೀಸ್ ಠಾಣೆಗೆ ಕರೆಸಲಾಗಿತ್ತು. ಭಾನುವಾರ ಬೆಳಿಗ್ಗೆ ಶೌಚಾಲಯಕ್ಕೆ ತೆರಳಲು ಅವಕಾಶ ಕೋರಿದರು. ಠಾಣೆಯಲ್ಲಿರುವ ಶೌಚಾಲಯಕ್ಕೆ ತೆರಳಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ’ ಎಂದು ಪೊಲೀಸ್ ಅಧಿಕಾರಿ ಪ್ರವೀಣ್ ಕುಮಾರ್ ಮೀನಾ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.