ಗುರುವಾರ , ಜನವರಿ 21, 2021
20 °C

ಮುಂಬೈ: ಸಾರ್ವಜನಿಕ ಶೌಚಾಲಯದ ಗೋಡೆ ಕುಸಿತ; ಮಹಿಳೆ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಇಲ್ಲಿನ ಕರ್ಲಾ ಪ್ರದೇಶದಲ್ಲಿ ಸೋಮವಾರ ಬೆಳಿಗ್ಗೆ ಸಾರ್ವಜನಿಕ ಶೌಚಾಲಯದ ಗೋಡೆ ಕುಸಿದು 55 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ ಎಂದು ನಾಗರಿಕ ಅಧಿಕಾರಿಗಳು ತಿಳಿಸಿದರು.

ಬೆಳಿಗ್ಗೆ 7.40ರ ಸುಮಾರಿಗೆ ಪಶ್ಚಿಮ ಕುರ್ಲಾದ ನಾಜ್‌ ಹೋಟೆಲ್‌ ಬಳಿಯಿದ್ದ ಸಾರ್ವಜನಿಕ ಶೌಚಾಲಯದ ಗೋಡೆ ಕುಸಿದಿದ್ದು, ಮಹಿಳೆ ಅವಶೇಷಗಳಡಿ ಸಿಲುಕಿದ್ದರು. 

‘ಮಹಿಳೆ ಕಾಲು ಕಟ್ಟಡದ ಅವಶೇಷಗಳಡಿ ಸಿಲುಕಿತ್ತು. ಅವರನ್ನು ರಕ್ಷಿಸಿ ತಕ್ಷಣವೇ ರಾಜವಾಡಿ ಆಸ್ಪತ್ರೆಗೆ ಒಯ್ಯಲಾಯಿತು.  ಆದರೆ ಮಹಿಳೆ ಆಸ್ಪತ್ರೆಗೆ ತಲುಪುವ ಮುನ್ನವೇ ಸಾವನ್ನಪ್ಪಿದ್ದರು’ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು