ಸೋಮವಾರ, ಆಗಸ್ಟ್ 15, 2022
21 °C

ಉತ್ತರಪ್ರದೇಶ: ಅತ್ಯಾಚಾರ ಯತ್ನಕ್ಕೆ ಪ್ರತಿರೋಧ– ಮಹಿಳೆ ಮೇಲೆ ಹಲ್ಲೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಜಫ್ಫರ್‌ನಗರ (ಉತ್ತರಪ್ರದೇಶ): ತನ್ನ ಮೇಲೆ ಅತ್ಯಾಚಾರವೆಸಗಲು ನಡೆದ ಪ್ರಯತ್ನಕ್ಕೆ ಪ್ರತಿರೋಧ ಒಡ್ಡಿದ ಮಹಿಳೆ ಮೇಲೆ ಒಬ್ಬ ವ್ಯಕ್ತಿ ಹಲ್ಲೆ ನಡೆಸಿ, ಆಕೆ ಧರಿಸಿದ್ದ ಬಟ್ಟೆಗಳನ್ನು ಹರಿದ ಘಟನೆ ಜಿಲ್ಲೆಯ ಭೋಪಾ ಗ್ರಾಮದಲ್ಲಿ ಶನಿವಾರ ನಡೆದಿದೆ.

ಗ್ರಾಮದ ಗೌರವ್‌ ಆರೋಪಿಯಾಗಿದ್ದು, ತಲೆ ಮರೆಸಿಕೊಂಡಿದ್ದಾನೆ. ಆತನಿಗಾಗಿ ಶೋಧ ಕಾರ್ಯ ಕೈಗೊಂಡಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಲು ಪ್ರಯತ್ನಿಸಿದ ಆರೋಪಡಿ ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.

ಮಹಿಳೆ ‍ಮನೆಯಲ್ಲಿ ಒಂಟಿಯಾಗಿದ್ದ ವೇಳೆ ಗೌರವ್ ಬಲವಂತವಾಗಿ ಮನೆಯೊಳಗೆ ಪ್ರವೇಶಿಸಿ, ಆಕೆಯ ಮೇಲೆ ಅತ್ಯಾಚಾರವೆಸಗಲು ಪ್ರಯತ್ನಿಸಿದ್ದಾನೆ ಎಂದು ಪೊಲೀಸರು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು