ಶನಿವಾರ, ಮೇ 21, 2022
23 °C
7 ಮಹಿಳೆ ಸೇರಿ 9 ಮಂದಿ ಆರೋಪಿಗಳ ಬಂಧನ

ದೆಹಲಿ: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಬೀದಿಗಳಲ್ಲಿ ಮೆರವಣಿಗೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಮಹಿಳೆಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎನ್ನಲಾಗಿದ್ದು, ನಂತರ ಬೀದಿಗಳಲ್ಲಿ ಆಕೆಯ ಮೆರವಣಿಗೆ ಮಾಡಿರುವ ಘಟನೆ ಪೂರ್ವ ದೆಹಲಿಯ ಕಸ್ತೂರಬಾ ನಗರದಲ್ಲಿ ನಡೆದಿದೆ.

ಸಂತ್ರಸ್ತೆಯ ಕೂದಲನ್ನು ಕತ್ತರಿಸಲಾಗಿತ್ತು. ಆಕೆ ಮುಖಕ್ಕೆ ಕಪ್ಪು ಬಣ್ಣ ಬಳಿಯಲಾಗಿತ್ತಲ್ಲದೇ, ಶೂಗಳ ಹಾರವನ್ನು ಹಾಕಲಾಗಿತ್ತು ಎಂದು ಪೊಲೀಸರು ಗುರುವಾರ ಹೇಳಿದ್ದಾರೆ.

ಘಟನೆಗೆ ಸಂಬಂಧಿಸಿ 11 ಜನ ಆರೋಪಿಗಳ ಪೈಕಿ, ಏಳು ಮಹಿಳೆಯರು ಸೇರಿ 9 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕರು ಈ ಕೃತ್ಯದಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ.

ಮಹಿಳೆಯ ಮೆರವಣಿಗೆ ಮಾಡುತ್ತಿದ್ದುದು ಎನ್ನಲಾದ ದೃಶ್ಯಗಳಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಮಹಿಳೆಯನ್ನು ರಕ್ಷಿಸಿರುವ ಪೊಲೀಸರು, ಆಕೆಗೆ ಆಪ್ತಸಮಾಲೋಚನೆಯ ವ್ಯವಸ್ಥೆ ಮಾಡಿದ್ದಾರೆ ಎಂದು ಮೂಲಗಳು ಹೇಳಿವೆ.

‘ವೈಯಕ್ತಿಕ ದ್ವೇಷದ ಕಾರಣದಿಂದಾಗಿ ಈ ಕೃತ್ಯ ಎಸಗಲಾಗಿದೆ. ಪೊಲೀಸ್‌ ಹೊರ ಠಾಣೆಯ ಕೆಲವೇ ಮೀಟರ್‌ ಅಂತರದಲ್ಲಿ ಬುಧವಾರ ಈ ಘಟನೆ ಸಂಭವಿಸಿದೆ. ಗಣರಾಜ್ಯೋತ್ಸವ ಕಾರಣ ಹೊರಠಾಣೆಯನ್ನು ಮುಚ್ಚಲಾಗಿತ್ತು’ ಎಂದು ಪೊಲೀಸರು ವಿವರಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು