ಸೋಮವಾರ, ಅಕ್ಟೋಬರ್ 26, 2020
20 °C

ಗುರುಗ್ರಾಮದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ: ತಲೆ ಜಜ್ಜಿ ತೀವ್ರ ಹಲ್ಲೆ

ಪಿಟಿಐ Updated:

ಅಕ್ಷರ ಗಾತ್ರ : | |

ಚಂಡೀಗಡ: ಗುರುಗ್ರಾಮದಲ್ಲಿ 25 ವರ್ಷದ ಯುವತಿಯ ಮೇಲೆ ನಾಲ್ವರು ದುಷ್ಕರ್ಮಿಗಳು ಅತ್ಯಾಚಾರವೆಸಗಿದ್ದೂ ಅಲ್ಲದೆ, ಕ್ರೂರವಾಗಿ ಥಳಿಸಿ ತಲೆಗೆ ತೀವ್ರವಾದ ಗಾಯ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶನಿವಾರ ರಾತ್ರಿ ಈ ಘಟನೆ ನಡೆದಿದೆ. ಅಪರಾಧ ನಡೆದ ಕೆಲವೇ ಗಂಟೆಗಳಲ್ಲಿ ಎಲ್ಲ ಆರೋಪಿಗಳನ್ನು ಬಂಧಿಸಲಾಗಿದೆ. ಅವರು 20 ರಿಂದ 25 ವರ್ಷದೊಳಗಿನವರಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಗುರುಗ್ರಾಮದ ಡಿಎಲ್‌ಎಫ್ 2ನೇ ಹಂತದಲ್ಲಿ ಈ ಘಟನೆ ನಡೆದಿದೆ. ಈ ಕುರಿತು ಡಿಎಲ್‌ಎಫ್‌ನ ಸಹಾಯಕ ಪೊಲೀಸ್ ಆಯುಕ್ತ ಕರಣ್ ಗೋಯಲ್ ದೂರವಾಣಿ ಮೂಲಕ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ನಾಲ್ವರು ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ, ಅವರಲ್ಲಿ ಮೂವರು ಡೆಲಿವರಿ ಬಾಯ್‌ಗಳಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.

ನಾಲ್ವರು ಆರೋಪಿಗಳಲ್ಲಿ ಒಬ್ಬ ಗುರುಗ್ರಾಮದ ಸಿಕಂದರ್‌ಪುರ ಮೆಟ್ರೋ ನಿಲ್ದಾಣದ ಬಳಿ ಶನಿವಾರ ರಾತ್ರಿ ಮಹಿಳೆಯನ್ನು ಭೇಟಿಯಾಗಿ, ತಾನು ಕೆಲಸ ಮಾಡುತ್ತಿದ್ದ ರಿಯಲ್‌ಎಸ್ಟೇಟ್‌ ಕಚೇರಿಗೆ ಕರೆದೊಯ್ದಿದ್ದ. ನಂತರ ಅಲ್ಲಿ ನಾಲ್ವರೂ ಕೂಡಿಕೊಂಡು ಅತ್ಯಾಚಾರ ಮಾಡಿದ್ದಾರೆ. ತನ್ನ ಮೇಲೆ ನಡೆಯುತ್ತಿದ್ದ ದೌರ್ಜನ್ಯವನ್ನು ಪ್ರತಿರೋಧಿಸಿದಾಗ ಆರೋಪಿಗಳು ಹಲ್ಲೆ ಮಾಡಿದ್ದಾರೆ. ಕೊನೆಗೆ ತಲೆಯನ್ನು ಗೊಡೆಗೆ ಬಡಿದಿದ್ದಾರೆ. ಇದರಿಂದ ಯುವತಿಯ ತಲೆಗೆ ಆಳವಾದ ಗಾಯವಾಗಿದ್ದು, ಆಕೆಯನ್ನು ಗುರುಗ್ರಾಮದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೃತ್ಯದ ನಂತರ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಕ್ರೌರ್ಯಕ್ಕೆ ಒಳಗಾಗಿ ಯುವತಿ ಸಹಾಯಕ್ಕಾಗಿ ಚೀರಾಡುತ್ತಿದ್ದುದ್ದನ್ನು ಕೇಳಿಸಿಕೊಂಡ ಕಾಂಪ್ಲೆಕ್ಸ್‌ನ ಭದ್ರತಾ ಸಿಬ್ಬಂದಿ, ವಿಷಯವನ್ನು ಪೊಲೀಸರಿಗೆ ತಿಳಿಸಿದ್ದಾರೆ. ನಂತರ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಪೊಲೀಸರು ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು