ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿಯ ಸ್ಪಾನಲ್ಲಿ ಮಹಿಳೆ ಮೇಲೆ ಇಬ್ಬರಿಂದ ಅತ್ಯಾಚಾರ: ದೆಹಲಿ ಮಹಿಳಾ ಆಯೋಗದ ಆರೋಪ

Last Updated 6 ಆಗಸ್ಟ್ 2022, 5:57 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ 22 ವರ್ಷದ ಮಹಿಳೆಯೊಬ್ಬರ ಮೇಲೆ ಇಬ್ಬರು ಅತ್ಯಾಚಾರ ಎಸಗಿದ್ದಾರೆ ಎಂದು ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಶನಿವಾರ ಆರೋಪಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮಲಿವಾಲ್, ಸಂತ್ರಸ್ತೆ ದೆಹಲಿಯ ಪಿತಾಂಪುರ ಪ್ರದೇಶದ ಸ್ಪಾವೊಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ಹೇಳಿದ್ದಾರೆ.

‘ಓಶಿಯನ್ ಸ್ಪಾ‘ ಮಾಲೀಕರು ಮತ್ತು ಒಬ್ಬ ಗ್ರಾಹಕ ಸಂತ್ರಸ್ತ ಮಹಿಳೆಗೆ ಮೊದಲು ಅಮಲು ಬರುವ ಪದಾರ್ಥ ನೀಡಿ, ನಂತರ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಸ್ಪಾನಲ್ಲಿ ಮಸಾಜ್ ಮಾಡಲೆಂದು ಮಹಿಳೆಯನ್ನು ನೇಮಕ ಮಾಡಿಕೊಳ್ಳಲಾಗಿತ್ತು’ ಎಂದು ಅವರು ಹೇಳಿದರು.

ಎಫ್‌ಐಆರ್ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮಲಿವಾಲ್‌ ಹೇಳಿದ್ದಾರೆ.

ಘಟನೆಯ ಬಗ್ಗೆ ದೆಹಲಿ ಪೊಲೀಸರು ಇನ್ನೂ ಯಾವುದೇ ವಿವರಗಳನ್ನು ಹಂಚಿಕೊಂಡಿಲ್ಲ.

ರಾಷ್ಟ್ರ ರಾಜಧಾನಿಯಲ್ಲಿ ವೇಶ್ಯಾವಾಟಿಕೆ ದಂಧೆ ಬಹಿರಂಗವಾಗಿ ನಡೆಯುತ್ತಿದೆ ಎಂದು ಮಲಿವಾಲ್ ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT