ಗುರುವಾರ , ಫೆಬ್ರವರಿ 2, 2023
27 °C

ಮುಂಬೈ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಹಲ್ಲೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: 42 ವರ್ಷ ವಯಸ್ಸಿನ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎನ್ನಲಾದ ಘಟನೆಯು ಇಲ್ಲಿಯ ಕುರ್ಲಾ ಪ್ರದೇಶದಲ್ಲಿ ಬುಧವಾರ ನಡೆದಿದೆ ಎಂದು ಪೊಲೀಸ್‌ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

‘ಮನೆಗೆ ನುಗ್ಗಿದ ಮೂವರು ಪುರುಷರು ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಆಕೆಯ ಮೇಲೆ ಹರಿತ ಆಯುಧಗಳಿಂದ ಹಲ್ಲೆ ನಡೆಸಿ, ಗುಪ್ತಾಂಗಗಳಿಗೆ ಸಿಗರೇಟ್‌ನಿಂದ ಸುಟ್ಟಿದ್ದಾರೆ. ಅಸಹಜ ರೀತಿಯಲ್ಲಿ ಅವರು ಲೈಂಗಿಕ ಕ್ರಿಯೆ ನಡೆಸಿದ್ದಾರೆ. ಆರೋಪಿಗಳಲ್ಲಿ ಒಬ್ಬನು ಈ ಕೃತ್ಯದ ವಿಡಿಯೊವನ್ನು ಚಿತ್ರೀಕರಿಸಿದ್ದಾನೆ. ಈ ಕುರಿತು ಪೊಲೀಸರಿಗೆ ದೂರು ನೀಡಿದರೆ ವಿಡಿಯೊವನ್ನು ಬಹಿರಂಗಪಡಿಸುವುದಾಗಿಯೂ ಆರೋಪಿಗಳು ಸಂತ್ರಸ್ತೆಯನ್ನು ಬೆದರಿಸಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆ ಮತ್ತು ಆರೋಪಿಗಳು ಒಂದೇ ಪ್ರದೇಶದ ನಿವಾಸಿಗಳು ಎಂದು ಅವರು ತಿಳಿಸಿದ್ದಾರೆ.

ಮಹಿಳೆಯು ತನ್ನ ಮೇಲೆ ಆದ ದೌರ್ಜನ್ಯದ ಕುರಿತು ನೆರೆಯ ಮನೆಯವರಿಗೆ ತಿಳಿಸಿದ್ದರು. ಅವರು ಎನ್‌ಜಿಒ ಒಂದನ್ನು ಸಂಪರ್ಕಿಸಿ ಘಟನೆಯನ್ನು ವಿವರಿಸಿದ್ದರು. ಬಳಿಕ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ. ಭಾರತೀಯ ದಂಡ ಸಂಹಿತೆಯ ನಾಲ್ಕು ಸೆಕ್ಷನ್‌ಗಳ ಅಡಿ ಮೂವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳನ್ನು ಸೆರೆ ಹಿಡಿಯಲು ಜಾಲ ರೂಪಿಸಲಾಗಿದೆ ಎಂದು ಪೊಲೀಸರು ತಿಳಿಸಿದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು