ಶಾಹಜಹಾನ್‌ಪುರ (ಉತ್ತರ ಪ್ರದೇಶ): 30 ವರ್ಷದ ಮಹಿಳೆ ಮೇಲೆ ಐವರು ಅತ್ಯಾಚಾರವೆಸಗಿದ್ದು, ಕೃತ್ಯವನ್ನು ರೆಕಾರ್ಡ್ ಮಾಡಿ ವಿಡಿಯೊವನ್ನು ವೈರಲ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಏ. 22 ರಂದು ಐವರು ತನ್ನ ಮನೆಯ ಹೊರಗಿನ ಗುಡಿಸಲಿಗೆ ಎಳೆದೊಯ್ದು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.
ಮದನಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮದ ನಿವಾಸಿಯಾಗಿರುವ ಮಹಿಳೆ ನೀಡಿರುವ ದೂರಿನ ಆಧಾರದ ಮೇಲೆ ಶನಿವಾರ ಎಫ್‌ಐಆರ್ ದಾಖಲಿಸಲಾಗಿದೆ. ಸದ್ಯ ತನಿಖೆ ನಡೆಯುತ್ತಿದೆ ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕ (ನಗರ) ಸಂಜಯ್ ಕುಮಾರ್ ತಿಳಿಸಿದ್ದಾರೆ.
ಆರೋಪಿಗಳು, ಕೃತ್ಯವನ್ನು ಚಿತ್ರೀಕರಿಸಿದ್ದಾರೆ ಮತ್ತು ಘಟನೆಯ ಒಂದು ವಾರದ ನಂತರ ವಿಡಿಯೊವನ್ನು ವೈರಲ್ ಮಾಡಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.
ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರನ್ನು ಬಂಧಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಎಎಸ್‌ಪಿ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.