ಬುಧವಾರ, ಅಕ್ಟೋಬರ್ 21, 2020
26 °C

ಬಿಹಾರದಲ್ಲಿ ಮಹಿಳೆ ಮೇಲೆ ಏಳು ಜನರಿಂದ ಅತ್ಯಾಚಾರ, ಪುತ್ರನ ಕೊಲೆ

ಪಿಟಿಐ Updated:

ಅಕ್ಷರ ಗಾತ್ರ : | |

ಬುಕ್ಸರ್ (ಬಿಹಾರ): 30 ವರ್ಷದ ಮಹಿಳೆ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಏಳು ಜನರು, ಬಳಿಕ ಮಹಿಳೆಯ ಐದು ವರ್ಷದ ಪುತ್ರನನ್ನು ಕೊಂದಿರುವ ಕೃತ್ಯ ಬುಕ್ಸರ್ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೃತ್ಯಕ್ಕೆ ಸಂಬಂಧಿಸಿದಂತೆ  ಮುನ್ನಿ ರಾಮ್‌ ಎಂಬಾತನನ್ನು ಬಂಧಿಸಲಾಗಿದೆ. ತಲೆಮರೆಸಿಕೊಂಡಿರುವ ಇತರರಿಗಾಗಿ ಶೋಧ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬ್ಯಾಂಕ್‌ ಖಾತೆಗೆ ಹಣ ಜಮೆ ಮಾಡಲು ಬಂದಿದ್ದ ಮಹಿಳೆಯನ್ನು ಆರೋಪಿಗಳು ಚೈಗೇನ್‌ ಅರಣ್ಯ ಪ್ರದೇಶಕ್ಕೆ ಕರೆದೊಯ್ದು ಕೃತ್ಯ ಎಸಗಿದ್ದು, ಬಾಲಕನನ್ನು ಕೊಂದಿದ್ದಾರೆ ಎಂದು ಮುರರ್ ಠಾಣೆಗೆ ನೀಡಿರುವ ದೂರಿನಲ್ಲಿ ಮಹಿಳೆಯ ತಂದೆ ತಿಳಿಸಿದ್ದಾರೆ.

ಕೃತ್ಯದ ಬಳಿಕ ಆರೋಪಿಗಳು ಮಹಿಳೆ ಮತ್ತು ಆಕೆಯ ಪುತ್ರನನ್ನು ಹಗ್ಗದಿಂದ ಕಟ್ಟಿಹಾಕಿದ್ದು, ನಾಲೆಗೆ ಎಸೆದಿದ್ದಾರೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

ಇಬ್ಬರನ್ನು ನಾಲೆಯಿಂದ ರಕ್ಷಿಸಿ  ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆ ವೇಳೆಗೆ ಬಾಲಕ ಮೃತಪಟ್ಟಿದ್ದ. ಮಹಿಳೆಯನ್ನು ಸಾದರ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಹಿಳೆಯ ವೈದ್ಯಕೀಯ ಪರೀಕ್ಷಾ ವರದಿಯನ್ನು ನಿರೀಕ್ಷಿಸಲಾಗಿದೆ. ಅವರ ಹೇಳಿಕೆಯನ್ನು ದಾಖಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು