ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ರೈಲು ನಿಲ್ದಾಣ: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ರೈಲ್ವೆ ಸಿಬ್ಬಂದಿ ಬಂಧನ

Last Updated 23 ಜುಲೈ 2022, 7:28 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿಯ ರೈಲು ನಿಲ್ದಾಣದಲ್ಲಿ 30 ವರ್ಷದ ಮಹಿಳೆಯೊಬ್ಬರ ಮೇಲೆ ನಾಲ್ಕು ಮಂದಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಆಘಾತಕಾರಿ ಘಟನೆ ವರದಿಯಾಗಿದೆ.

ಅತ್ಯಾಚಾರಿಗಳು ರೈಲ್ವೆ ಇಲಾಖೆಯ ಸಿಬ್ಬಂದಿಯಾಗಿದ್ದು, ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾಲ್ವರು ಆರೋಪಿಗಳು ರೈಲ್ವೆಯ ಎಲೆಕ್ಟ್ರಿಕಲ್ ವಿಭಾಗದ ಉದ್ಯೋಗಿಗಳಾಗಿದ್ದಾರೆ. ಗುರುವಾರ ತಡರಾತ್ರಿ ರೈಲ್ವೆ ನಿಲ್ದಾಣದ ಕೊಠಡಿಯಲ್ಲಿಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇಬ್ಬರು ಆರೋಪಿಗಳು ಮಹಿಳೆಯ ಮೇಲೆ ಅತ್ಯಾಚಾರವೆಸಗಿದರೆ, ಇತರರು ಹೊರಗೆ ಕಾವಲು ಕಾಯುತ್ತಿದ್ದರು ಎನ್ನಲಾಗಿದೆ. ಬಂಧಿತ ಆರೋಪಿಗಳನ್ನು 35 ವರ್ಷದ ಸತೀಶ್ ಕುಮಾರ್, 38 ವರ್ಷದ ವಿನೋದ್ ಕುಮಾರ್, 33 ವರ್ಷದ ಮಂಗಲ್ ಚಂದ್ ಮತ್ತು 37 ವರ್ಷದ ಜಗದೀಶ್ ಚಂದ್ ಎಂದು ಗುರುತಿಸಲಾಗಿದೆ.

ಸಂತ್ರಸ್ತಮಹಿಳೆ ಬೆಳಿಗ್ಗೆ 3.27ರ ಸುಮಾರಿಗೆ ಪೊಲೀಸ್ ಠಾಣೆಗೆ ಕರೆ ಮಾಡಿ ತನ್ನ ಮೇಲೆ ಅತ್ಯಾಚಾರ ನಡೆದಿರುವ ಘಟನೆಯ ಬಗ್ಗೆ ತಿಳಿಸಿದ್ದರು.ತಕ್ಷಣ ರೈಲ್ವೆ ಸ್ಟೇಷನ್​ಗೆ ಧಾವಿಸಿದ ಪೊಲೀಸರು ಆಕೆಯನ್ನು ರಕ್ಷಿಸಿದ್ದಾರೆ ಎಂದುರೈಲ್ವೆ ಡಿಸಿಪಿ ಹರೇಂದ್ರ ಸಿಂಗ್ ತಿಳಿಸಿದ್ದಾರೆ.

ಸಂತ್ರಸ್ತ ಮಹಿಳೆ ಹರಿಯಾಣದ ಫರಿದಾಬಾದ್‌ನಲ್ಲಿ ವಾಸಿಸುತ್ತಿದ್ದರು. ಎರಡು ವರ್ಷಗಳ ಹಿಂದೆ ಪತಿಯಿಂದ ಬೇರ್ಪಟ್ಟು ಕೆಲಸ ಅರಸಿ ದೆಹಲಿಗೆ ಬಂದಿದ್ದರು. ಆರೋಪಿಗಳಲ್ಲಿ ಒಬ್ಬನಾದ ಸತೀಶ್‌ನನ್ನು ಸ್ನೇಹಿತನ ಮೂಲಕ ಭೇಟಿಯಾಗಿದ್ದ ಆಕೆಗೆ ಆತ ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಭರವಸೆ ನೀಡಿದ್ದ. ಗುರುವಾರ ಸತೀಶ್ ಆಕೆಗೆ ಕರೆ ಮಾಡಿ ತಮ್ಮ ಹೊಸ ಮನೆಗೆ ಮಗನ ಹುಟ್ಟುಹಬ್ಬಕ್ಕೆ ಆಹ್ವಾನಿಸಿದ್ದ. ರಾತ್ರಿ 10.30ರ ಸುಮಾರಿಗೆ ಮಹಿಳೆ ಸತೀಶ್ ಅವರನ್ನು ಕೀರ್ತಿನಗರ ಮೆಟ್ರೋ ನಿಲ್ದಾಣದಲ್ಲಿ ಭೇಟಿಯಾಗಿದ್ದಳು. ನಂತರ ಆಕೆಯನ್ನು ದೆಹಲಿಯ ರೈಲು ನಿಲ್ದಾಣಕ್ಕೆ ಕರೆದೊಯ್ದು ಅಲ್ಲಿ ಮೂವರು ಗೆಳೆಯರನ್ನು ಪರಿಚಯ ಮಾಡಿಸಿದ್ದ. ನಂತರ ಆಕೆಯನ್ನು ರೈಲ್ವೆ ಸ್ಟೇಷನ್​ನಲ್ಲಿದ್ದ ರೂಂಗೆ ಕರೆದುಕೊಂಡು ಹೋಗಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT