ಶುಕ್ರವಾರ, ಜುಲೈ 1, 2022
28 °C

ದೆಹಲಿ: ಮದುವೆ ಸಮಾರಂಭದಲ್ಲಿ 54 ವರ್ಷದ ಮಹಿಳೆಗೆ ಗುಂಡೇಟು

ಪಿಟಿಐ ಚಿತ್ರ Updated:

ಅಕ್ಷರ ಗಾತ್ರ : | |

ನವದೆಹಲಿ: ದಕ್ಷಿಣ ದೆಹಲಿಯ ಛತ್ತರ್‌ಪುರ ಪ್ರದೇಶದಲ್ಲಿ ನಡೆದ ವಿವಾಹ ಸಮಾರಂಭದಲ್ಲಿ 54 ವರ್ಷದ ಮಹಿಳೆಯೊಬ್ಬರು ಗುಂಡೇಟಿನಿಂದ ಗಾಯಗೊಂಡಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಗುಂಡೇಟಿನಿಂದ ಗಾಯಗೊಂಡ ಮಹಿಳೆಯೊಬ್ಬರನ್ನು ಆಸ್ಪತ್ರೆಗೆ ಕರೆತರಲಾಗಿದೆ ಎಂದು ವಸಂತ್ ಕುಂಜ್‌ನ ಫೋರ್ಟಿಸ್ ಆಸ್ಪತ್ರೆಯಿಂದ ಪೊಲೀಸರಿಗೆ ಗುರುವಾರ ಮಾಹಿತಿ ಲಭ್ಯವಾಗಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿದಾಗ ಗಾಯಗೊಂಡಿದ್ದ ಮಹಿಳೆಯು ಘಟನೆಯ ಬಗ್ಗೆ ಹೇಳಿಕೆ ನೀಡುವ ಪರಿಸ್ಥಿತಿಯಲ್ಲಿರಲಿಲ್ಲ ಎಂದು ಅವರು ಹೇಳಿದರು.

ಮಹಿಳೆಗೆ ಹೇಗೆ ಗುಂಡು ತಗುಲಿತು ಎಂಬುದು ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಛತ್ತರ್‌ಪುರ ದೇವಸ್ಥಾನದ ಮಾತಂಗಿ ಭವನದಲ್ಲಿ ಮದುವೆ ನಡೆಯುತ್ತಿತ್ತು. ಹರಿಯಾಣದ ಬಹದ್ದೂರ್‌ಗಢದಿಂದ ಮದುವೆಗೆ ಜನರು ಆಗಮಿಸಿದ್ದರು. ಗಾಯಗೊಂಡ ಮಹಿಳೆ ಕೂಡ ಇದೇ ಗುಂಪಿನ ಭಾಗವಾಗಿದ್ದರು ಎಂದು ಪೊಲೀಸ್ ಉಪ ಕಮಿಷನರ್ (ದಕ್ಷಿಣ) ಬೆನಿಟಾ ಮೇರಿ ಜೈಕರ್ ಹೇಳಿದ್ದಾರೆ.

ಈ ಸಂಬಂಧ ಐಪಿಸಿ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಕೈಗೊಳ್ಳಲಾಗಿದೆ ಎಂದು ಡಿಸಿಪಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು