ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ: ಚಲಿಸುತ್ತಿದ್ದ ಮೆಟ್ರೋ ರೈಲಿನೆದುರು ಜಿಗಿದು ಆತ್ಮಹತ್ಯೆ ಮಾಡಿಕೊಂಡ ಮಹಿಳೆ

Last Updated 4 ಜುಲೈ 2022, 10:00 IST
ಅಕ್ಷರ ಗಾತ್ರ

ನವದೆಹಲಿ: ಚಲಿಸುತ್ತಿದ್ದ ಮೆಟ್ರೋ ರೈಲಿಗೆ ಎದುರಾಗಿ ಹಳಿ ಮೇಲೆ ಜಿಗಿದುಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣದೆಹಲಿ ಮೆಟ್ರೋದ ಹಳದಿ ಮಾರ್ಗದಲ್ಲಿ ಸೋಮವಾರ ವರದಿಯಾಗಿದೆ.

ಜೋರ್ ಬಾಘ್‌ ಮೆಟ್ರೊ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಇದರಿಂದಾಗಿ ರೈಲು ಸಂಚಾರಕ್ಕೆ ಕೆಲಕಾಲ ತೊಂದರೆಯಾಗಿದೆ.

ಪ್ರಕರಣ ಕುರಿತು ಬೆಳಗ್ಗೆ 11.23ಕ್ಕೆ ಟ್ವೀಟ್‌ ಮಾಡಿದ್ದ ದೆಹಲಿ ಮೆಟ್ರೊ ರೈಲು ನಿಗಮವು (ಡಿಎಂಆರ್‌ಸಿ), ಜೋರ್ ಬಾಘ್‌ ನಿಲ್ದಾಣದಲ್ಲಿ ಮಹಿಳೆಯೊಬ್ಬರು ರೈಲು ಹಳಿಯಲ್ಲಿ ಸಿಲುಕಿದ್ದಾರೆ. ಹೀಗಾಗಿ ಹಳದಿ ಮಾರ್ಗದಲ್ಲಿನ ಸಂಚಾರ ವ್ಯತ್ಯಯವಾಗಲಿದೆ. ಉಳಿದ ಮಾರ್ಗಗಳ ಸಂಚಾರ ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ ಎಂದು ಮಾಹಿತಿ ನೀಡಿತ್ತು.ನಂತರ, 11.32ಕ್ಕೆ ಮತ್ತೊಂದು ಟ್ವೀಟ್‌ ಮಾಡಿ, ಸಂಚಾರ ಪುನರಾರಂಭವಾಗಿದೆ ಎಂದುತಿಳಿಸಿದೆ.

ರೈಲು, ಹುಡಾ ಸಿಟಿ ಕಡೆಗೆ ಚಲಿಸುತ್ತಿದ್ದಾಗ ಮಹಿಳೆ ಪ್ಲಾಟ್‌ಫಾರ್ಮ್‌ನಿಂದ ಹಳಿಗೆಜಿಗಿದಿದ್ದಾರೆ. ಈ ವೇಳೆ ರೈಲು ಮಹಿಳೆಗೆ ಡಿಕ್ಕಿಯಾಗಿದ್ದು, ತಲೆಗೆ ಪೆಟ್ಟಾಗಿತ್ತು. ತಕ್ಷಣವೇಅವರನ್ನು ಸಫ್ದಾರ್‌ಜಂಗ್‌ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಷ್ಟರಲ್ಲಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಖಚಿತಪಡಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳೆಗೆ ಸುಮಾರು 50 ವರ್ಷ ವಯಸ್ಸಾಗಿದ್ದು ಗುರುತು ಪತ್ತೆಯಾಗಿಲ್ಲ. ಆತ್ಮಹತ್ಯೆಗೆ ಕಾರಣ ಏನೆಂಬುದು ತಿಳಿದುಬಂದಿಲ್ಲ. ಶವವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗುವುದು ಎಂದೂ ಅವರು ಹೇಳಿದ್ದಾರೆ.

ಹಳದಿ ಮಾರ್ಗವು ದೆಹಲಿಯ ಸಮಯ್‌ಪುರ ಬದ್ಲಿ ನಿಲ್ದಾಣದಿಂದಗುರುಗ್ರಾಮದ ಹುಡಾ ಸಿಟಿ ಕೇಂದ್ರಕ್ಕೆ ಸಂಪರ್ಕ ಕಲ್ಪಿಸುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT