ಬುಧವಾರ, ಆಗಸ್ಟ್ 17, 2022
26 °C

ಮಗಳ ಮೇಲೆ ಕೆಟ್ಟ ಉದ್ದೇಶ ಇಟ್ಟುಕೊಂಡಿದ್ದ ಪತಿಯನ್ನು ಕೊಂದ ಪತ್ನಿ!

ಪಿಟಿಐ Updated:

ಅಕ್ಷರ ಗಾತ್ರ : | |

ಕೌಶಂಬಿ (ಉತ್ತರ ಪ್ರದೇಶ): ತಮ್ಮ ಮಗಳ ಮೇಲೆ ಕೆಟ್ಟ ಉದ್ದೇಶ ಇಟ್ಟುಕೊಂಡು ವರ್ತಿಸುತ್ತಿದ್ದ 40 ವರ್ಷದ ಪತಿಯನ್ನೇ ಥಳಿಸಿ ಕೊಂದ ಆರೋಪದ ಮೇಲೆ ಉತ್ತರಪ್ರದೇಶದ ಕೌಶಂಬಿ ಜಿಲ್ಲೆಯ ಮಹಿಳೆಯೊಬ್ಬರನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಸೈನಿ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುನೀತಾ ಎಂಬುವವರು ತನ್ನ ಪತಿ ಸುರೇಶ್ ಸಿಂಗ್ ಎಂಬಾತನನ್ನು ಕೋಲಿನಿಂದ ಚೆನ್ನಾಗಿ ಥಳಿಸಿದ್ದಾರೆ. ಈ ವೇಳೆ ಗಂಭೀರವಾಗಿ ಗಾಯಗೊಂಡ ಆತ ಮೃತಪಟ್ಟಿದ್ದಾನೆ ಎಂದು ಪೊಲೀಸ್ ಅಧೀಕ್ಷಕರಾದ ಅಭಿನಂದನ್ ತಿಳಿಸಿದ್ದಾರೆ.

ಮಹಿಳೆಯ ಬಂಧನದ ಬಳಿಕ ಪೊಲೀಸರಿಗೆ ತಿಳಿಸಿರುವ ಮಾಹಿತಿ ಪ್ರಕಾರ, ಆಕೆಯ ಪತಿಯು ಕುಡುಕನಾಗಿದ್ದು, ಮಗಳೊಂದಿಗೆ ಕೆಟ್ಟದಾಗಿ ವರ್ತಿಸುತ್ತಿದ್ದ. ದಂಪತಿ ಮಧ್ಯೆ ಆಗಾಗ್ಗೆ ಇದೇ ವಿಷಯದ ಬಗ್ಗೆ ಜಗಳ ಉಂಟಾಗುತ್ತಿತ್ತು ಎಂದು ತಿಳಿಸಿದ್ದಾರೆ.

ಸದ್ಯ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿರುವುದಾಗಿ ಎಸ್‌ಪಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು