ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುಎಇ ಜೈಲಿನಲ್ಲಿರುವ ಮಗನಿಗೆ ನೆರವು ಕೋರಿ ಹೈಕೋರ್ಟ್‌ ಮೊರೆ ಹೋದ ಮಹಿಳೆ

Last Updated 5 ಜುಲೈ 2021, 8:07 IST
ಅಕ್ಷರ ಗಾತ್ರ

ಕೊಚ್ಚಿ: ಬೇಹುಗಾರಿಕೆ ಆರೋಪದಡಿ ಯುಎಇ ಜೈಲಿನಲ್ಲಿ ಬಂಧನಕ್ಕೊಳಗಾಗಿರುವ ತನ್ನ ಮಗನಿಗೆ ಅಗತ್ಯ ಬೆಂಬಲ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಮಹಿಳೆಯೊಬ್ಬರು ಕೇರಳ ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ಭಾರತಕ್ಕಾಗಿ ಬೇಹುಗಾರಿಕೆ ನಡೆಸಿದ ಆರೋಪದಡಿ ಶಿಹಾನಿ ಮೀರಾ ಸಾಹಿಬ್ ಜಮಾಲ್‌ ಮೊಹಮ್ಮದ್‌ ಎಂಬುವರನ್ನು ಬಂಧಿಸಲಾಗಿದೆ. 2015ರ ಆಗಸ್ಟ್ 25ರಿಂದ ಜಮಾಲ್‌, ಅಬುಧಾಬಿ ಕೇಂದ್ರ ಕಾರಾಗೃಹದಲ್ಲಿ ಬಂಧನಕ್ಕೊಳಗಾಗಿದ್ದಾರೆ.

‘ಜೈಲಿನಲ್ಲಿ ನನ್ನ ಮಗನಿಗೆ ಹಿಂಸೆ ಮತ್ತು ಕಿರುಕುಳವನ್ನು ನೀಡಲಾಗುತ್ತಿದೆ. ಭಾರತೀಯ ರಾಯಭಾರ ಕಚೇರಿ ಅಥವಾ ಕೇಂದ್ರ ಸರ್ಕಾರ ನನ್ನ ಮಗನಿಗೆ ಯಾವುದೇ ನೆರವು ನೀಡಿಲ್ಲ’ ಎಂದು ಶಾಹುಬನಾಥ್ ಬೀವಿ ಅವರು ಅರ್ಜಿಯಲ್ಲಿ ತಿಳಿಸಿದ್ದಾರೆ.

‘ಅಲ್ಲಿನ ನ್ಯಾಯಾಲಯಗಳಲ್ಲಿ ತನ್ನನ್ನು ರಕ್ಷಿಸಿಕೊಳ್ಳಲು ನನ್ನ ಮಗನಿಗೆ ಸರಿಯಾದ ಕಾನೂನು ನೆರವು ಕೂಡ ಒದಗಿಸಿಲ್ಲ’ ಎಂದು ಮಹಿಳೆ ಆರೋಪಿಸಿದ್ದಾರೆ.

ಮಾನವ ಹಕ್ಕುಗಳ ಉಲ್ಲಂಘನೆ, ಮೂಲಭೂತ ಹಕ್ಕುಗಳ ನಿರಾಕರಣೆಯನ್ನು ಪ್ರಶ್ನಿಸಿ ಮತ್ತು ಸರ್ಕಾರದಿಂದ ನೆರವು ಒದಗಿಸುವಂತೆ ಕೋರಿ ಹಲವು ಬಾರಿ ಮನವಿ ಮಾಡಲಾಗಿದೆ. ಜೂನ್‌ 11ರಂದು ಹೊಸದಾಗಿ ಮನವಿ ಮಾಡಲಾಗಿದೆ. ಆದರೆ, ಇದಕ್ಕೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ’ ಎಂದು ಅರ್ಜಿಯಲ್ಲಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT