ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

8ನೇ ತರಗತಿ ವರೆಗೆ ಓದಿದ್ದ ನಕಲಿ ವೈದ್ಯನಿಂದ ಶಸ್ತ್ರಚಿಕಿತ್ಸೆ: ತಾಯಿ, ಶಿಶು ಸಾವು

Last Updated 20 ಮಾರ್ಚ್ 2021, 9:59 IST
ಅಕ್ಷರ ಗಾತ್ರ

ಸುಲ್ತಾನ್‌ಪುರ: ನಕಲಿ ವೈದ್ಯರೊಬ್ಬರು ಶಸ್ತ್ರಚಿಕಿತ್ಸೆ ನೆರವೇರಿಸುತ್ತಿದ್ದ ವೇಳೆ ಮಹಿಳೆ ಮತ್ತು ಆಕೆಯ ನವಜಾತ ಶಿಶು ಮೃತಪಟ್ಟ ಘಟನೆ ಉತ್ತರಪ್ರದೇಶದ ಆಸ್ಪತ್ರೆಯೊಂದರಲ್ಲಿ ನಡೆದಿದೆ.

‘ಈ ಪ್ರಕರಣ ಸಂಬಂಧ ನಕಲಿ ವೈದ್ಯ ಮತ್ತು ಆಸ್ಪತ್ರೆಯ ಕಾರ್ಯನಿರ್ವಾಹಕನನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಪೂನಂ (35) ಎಂಬ ಮಹಿಳೆಗೆ ಗುರುವಾರ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ದೀಹ ಗ್ರಾಮದಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿತ್ತು.ರಾಜೇಂದ್ರ ಕುಮಾರ್‌ ಶುಕ್ಲಾ ಎಂಬುವವರು ಶಸ್ತ್ರಚಿಕಿತ್ಸೆ ನೆರವೇರಿಸುತ್ತಿದ್ದ ಸಮಯದಲ್ಲಿ ಮಗು ಮತ್ತು ತಾಯಿ ಮೃತ‍ಪಟ್ಟಿದ್ದಾರೆ’ ಎಂದು ಪೊಲೀಸ್‌ ವರಿಷ್ಠಾಧಿಕಾರಿ ಅರವಿಂದ್‌ ಚತುರ್ವೇದಿ ತಿಳಿಸಿದರು.

‘ರಾಜೇಂದ್ರ ಕುಮಾರ್‌ ಶುಕ್ಲಾ ನಕಲಿ ವೈದ್ಯನಾಗಿದ್ದು, ಕೇವಲ 8 ನೇ ತರಗತಿವರೆಗೆ ವಿದ್ಯಾಭ್ಯಾಸ ಮಾಡಿದ್ದಾನೆ. ಆಸ್ಪತ್ರೆಯ ಕಾರ್ಯನಿರ್ವಾಹಕ ರಾಜೇಶ್‌ ಕುಮಾರ್‌ ಸಾಹ್ನಿ 12 ಕ್ಲಾಸ್‌ ಪಾಸ್‌ ಆಗಿದ್ದಾನೆ. ಈ ಸಂಬಂಧ ಸಂತ್ರಸ್ತೆಯ ಪತಿ ನೀಡಿರುವ ದೂರಿನನ್ವಯ ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದೇವೆ’ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT