ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮ ಸಂಬಂಧ ಆರೋಪ: ಮಹಿಳೆಯನ್ನು ವಿವಸ್ತ್ರಗೊಳಿಸಿ ಮೆರವಣಿಗೆ

Last Updated 21 ಆಗಸ್ಟ್ 2021, 7:04 IST
ಅಕ್ಷರ ಗಾತ್ರ

ದುಮ್ಕಾ(ಜಾರ್ಖಂಡ್‌): ವಿವಾಹಿತ ಪುರುಷನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾರೆಂಬ ಕಾರಣಕ್ಕಾಗಿ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ, ಕುತ್ತಿಗೆ ಶೂಗಳ ಹಾರ ಹಾಕಿ ಮೆರವಣಿಗೆ ಮಾಡಿದ ಘಟನೆ ಜಾರ್ಖಂಡ್‌ ರಾಜ್ಯದ ದುಮ್ಕಾ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ.

ಜಿಲ್ಲೆಯ ರಣೀಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿವಾಹಿತ ಮಹಿಳೆ, ವಿವಾಹಿತ ವ್ಯಕ್ತಿಯೊಂದಿಗೆ ಪರಾರಿಯಾಗುತ್ತಿದ್ದಾಗ ಬುಧವಾರ ರಾತ್ರಿ ವ್ಯಕ್ತಿಯ ಪತ್ನಿಯ ಕುಟುಂಬದ ಸದಸ್ಯರ ಕೈಗೆ ಸಿಕ್ಕಿಬಿದ್ದಿದ್ದಾರೆ. ನಂತರ ಆ ಕುಟುಂಬದ ಸದಸ್ಯರು ಮಹಿಳೆಯನ್ನು ಥಳಿಸಿದ್ದಾರೆ. ನಂತರ ಅಕೆಯನ್ನು ವಿವಸ್ತ್ರಳನ್ನಾಗಿಸಿ, ಕುತ್ತಿಗೆಗೆ ಶೂಗಳ ಹಾರ ಹಾಕಿ ಹಳ್ಳಿಯಾದ್ಯಂತ ಮೆರವಣಿಗೆ ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

‘ಈ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಮಂದಿ ವಿರುದ್ಧ ಗುರುವಾರ ಎಫ್‌ಐಆರ್ ದಾಖಲಿಸಲಾಗಿದ್ದು. ಘಟನೆಗೆ ಸಂಬಂಧಿಸಿದಂತೆ, ಪರಾರಿಯಾಗುತ್ತಿದ್ದ ವ್ಯಕ್ತಿ ಮತ್ತು ಆತನ ಪತ್ನಿ ಸೇರಿದಂತೆ ಆರು ಜನರನ್ನು ಬಂಧಿಸಲಾಗಿದೆ‘ ಎಂದು ಅಧಿಕಾರಿ ಹೇಳಿದರು. ಇದೇ ವೇಳೆ, ಥಳಿತಕ್ಕೊಳಗಾದ ಮಹಿಳೆ, ‘ತನ್ನಿಂದ ₹25ಸಾವಿರ ಹಣವನ್ನು ಕಸಿಕೊಂಡಿ ದ್ದಾರೆ‘ಎಂದು ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT