ಬುಧವಾರ, ಜೂನ್ 29, 2022
24 °C

ಮಥುರಾ: ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ; ಮಂತ್ರವಾದಿ ಪರಾರಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮಥುರಾ‌: ‘ಇಲ್ಲಿನ ಬಾರ್ಸಾನಾ ಪ್ರದೇಶದ ಹಳ್ಳಿಯೊಂದರಲ್ಲಿ ವಿವಾಹಿತ ಮಹಿಳೆಯೊಬ್ಬರ ಮೇಲೆ ಮಂತ್ರವಾದಿಯೊಬ್ಬ ಅತ್ಯಾಚಾರವೆಸಗಿದ್ದಾನೆ’ ಎಂದು ಪೊಲೀಸರು ಶನಿವಾರ ತಿಳಿಸಿದರು.

‘ಗುರುವಾರ ಸಂತ್ರಸ್ತೆಯ ಗ್ರಾಮಕ್ಕೆ ತನ್ನ ಸಹಚರ ಸಂದೀಪ್‌ ಥೋಮರ್‌ನೊಂದಿಗೆ ಬಂದಿದ್ದ ಮಂತ್ರವಾದಿ ನರೇಂದ್ರ ಎಂಬಾತ ಗ್ರಾಮಸ್ಥರ ಮೇಲೆ ವಾಮಾಚಾರ ಮಾಡಿದ್ದಾನೆ. ಈ ಬಳಿಕ ಸಂತ್ರಸ್ತೆಗೆ ರಾತ್ರಿ ತನ್ನನ್ನು ಭೇಟಿಯಾಗುವಂತೆ ಹೇಳಿದ್ದಾನೆ. ಈ ವೇಳೆ ಆತ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ್ದಾನೆ’ ಎಂದು ಪೊಲೀಸರು ಮಾಹಿತಿ ನೀಡಿದರು.

‘ಮಹಿಳೆಯ ದೂರಿನ ಆಧಾರದ ಮೇಲೆ ಸಹಚರನನ್ನು ಬಂಧಿಸಲಾಗಿದೆ. ಆದರೆ ಮಂತ್ರವಾದಿ ಪರಾರಿಯಾಗಿದ್ದು, ಆತನ ಪತ್ತೆಗೆ ಶೋಧ ನಡೆಸಲಾಗುತ್ತಿದೆ. ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ’ ಎಂದು ಪೊಲೀಸ್‌ ಅಧಿಕಾರಿ ಆಜಾದ್‌ ಪಾಲ್‌ ಸಿಂಗ್‌ ಅವರು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು