ಮಂಗಳವಾರ, ಮಾರ್ಚ್ 21, 2023
23 °C

ಉತ್ತರ ಪ್ರದೇಶ: ಮದುವೆಯಾಗುವುದಾಗಿ ನಂಬಿಸಿ ಮಹಿಳೆ ಮೇಲೆ ಐದು ವರ್ಷಗಳಿಂದ ಅತ್ಯಾಚಾರ

ಪಿಟಿಐ Updated:

ಅಕ್ಷರ ಗಾತ್ರ : | |

ಬಲ್ಲಿಯಾ (ಉತ್ತರ ಪ್ರದೇಶ): 24 ವರ್ಷದ ಮಹಿಳೆಯೊಬ್ಬರನ್ನು ಮದುವೆಯಾಗುವುದಾಗಿ ನಂಬಿಸಿದ್ದ ವ್ಯಕ್ತಿಯೊಬ್ಬ ಐದು ವರ್ಷಗಳಿಂದ ನಿರಂತರವಾಗಿ ಅತ್ಯಾಚಾರ ನಡೆಸಿರುವ ಪ್ರಕರಣ ಜಿಲ್ಲೆಯ ದುಭಾರ್‌ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಮದುವೆಯಾಗುವುದಾಗಿ ಹೇಳಿ ಕಳೆದ ಐದು ವರ್ಷಗಳಿಂದ ಅತ್ಯಾಚಾರ ನಡೆಸಿರುವ ಆರೋಪಿ ಇದೀಗ ಮದುವೆಯಾಗಲು ನಿರಾಕರಿಸಿದ್ದಾನೆ ಎಂದು ಆರೋಪಿಸಿ ಮಹಿಳೆಯು ಗುರುವಾರ ರಾತ್ರಿ ದೂರು ನೀಡಿದ್ದಾರೆ ಎಂದು ದುಭಾರ್ ಪೊಲೀಸ್‌ ಠಾಣೆಯ ಉಸ್ತುವಾರಿ ಅಧಿಕಾರಿ ರಾಜೇಶ್‌ ಮಿಶ್ರಾ ಮಾಹಿತಿ ನೀಡಿದ್ದಾರೆ.

ತನ್ನನ್ನು ನಿಂದಿಸಿದ್ದ ಆರೋಪಿಯು ಕೊಲೆ ಬೆದರಿಕೆಯನ್ನೂ ಹಾಕಿದ್ದ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಸದ್ಯ ಆರೋಪಿಯನ್ನು ಬಂಧಿಸಲಾಗಿದೆ. ಅತ್ಯಾಚಾರ, ನಿಂದನೆ, ಕೊಲೆ ಬೆದರಿಕೆಗಳಿಗೆ ಸಂಬಂಧಿಸಿದಂತೆ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಆತನ ವಿರುದ್ಧ ವಿವಿಧ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಮಿಶ್ರಾ ಹೇಳಿದ್ದಾರೆ.

ಮಹಿಳೆಯನ್ನು ವೈದ್ಯಕೀಯ ಪರೀಕ್ಷೆ ಸಲುವಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದೂ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು