ಉತ್ತರ ಪ್ರದೇಶ: ಶೌಚಾಲಯದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ

ಪ್ರತಾಪಗಡ: ಉತ್ತರ ಪ್ರದೇಶದ ಪ್ರತಾಪಗಡ ರೈಲು ನಿಲ್ದಾಣದ ಪಾರ್ಕಿಂಗ್ ಬಳಿ ಇರುವ ಸಾರ್ವಜನಿಕ ಶೌಚಾಲಯದೊಳಗೆ 20 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಮಾರ್ಚ್ 19ರಂದು ಕೃತ್ಯ ಎಸಗಲಾಗಿದ್ದು, ಈ ಸಂಬಂಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.
ಸಂತ್ರಸ್ತೆ, ಪತಿಯೊಂದಿಗೆ ರೈಲಿಗಾಗಿ ಕಾಯುತ್ತಿದ್ದರು. ಈ ಸಂದರ್ಭದಲ್ಲಿ ಘಟನೆ ನಡೆದಿದೆ ಎಂದು ಕೊತ್ವಾಲಿ ಪೊಲೀಸ್ ಠಾಣೆಯ ಎಸ್‌ಎಚ್‌ಒ ಆರ್.ಎನ್. ರೈ ತಿಳಿಸಿದ್ದಾರೆ.
ಇದನ್ನೂ ಓದಿ: ನಕಲಿ ಮದ್ಯ ಸೇವನೆ ಶಂಕೆ; ಬಿಹಾರದಲ್ಲಿ 10 ಮಂದಿ ಸಾವು
ಬೆಳಿಗ್ಗೆ ಪತ್ನಿಯನ್ನು ಒಬ್ಬಂಟಿಯಾಗಿ ಬಿಟ್ಟು ಪತಿ ಚಹಾ ತರಲು ಹೋಗಿದ್ದನು. ಈ ವೇಳೆ ಮಹಿಳೆಯ ಬಳಿ ಬಂದ ಆರೋಪಿ ಪಾರ್ಕಿಂಗ್ ಸ್ಟ್ಯಾಂಡ್ ಬಳಿ ಇರುವ ಸ್ವಚ್ಛ ಶೌಚಾಲಯವನ್ನು ಬಳಸಬಹುದು ಎಂದು ಹೇಳಿ ಮಹಿಳೆಯ ಕೈಗೆ ಕೀಲಿಯನ್ನು ನೀಡಿದ್ದಾನೆ. ಬಳಿಕ ಮಹಿಳೆ ಶೌಚಾಲಯಕ್ಕೆ ತೆರಳಿದಾಗ ಆರೋಪಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಘಟನೆ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.
ಮಹಿಳೆ ನೀಡಿದ ದೂರಿನ ಅನ್ವಯ ನಾವು ಅತ್ಯಾಚಾರ ಆರೋಪದಡಿ ಎಫ್‌ಐಆರ್ (ಐಪಿಸಿ ಸೆಕ್ಷನ್ 376) ದಾಖಲಿಸಿದ್ದೇವೆ. ಆರೋಪಿಯ ಬಂಧನಕ್ಕೆ ಎರಡು ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.