ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುರುಗ್ರಾಮ: ಮಹಿಳೆ ಮೇಲೆ ಅತ್ಯಾಚಾರವೆಸಗಿ ಚಾಕುವಿನಿಂದ ತಿವಿದ ದುಷ್ಕರ್ಮಿಗಳು

Last Updated 4 ಮೇ 2022, 3:22 IST
ಅಕ್ಷರ ಗಾತ್ರ

ಗುರುಗ್ರಾಮ: ಇಲ್ಲಿನ ಡಿಎಲ್‌ಎಫ್ 3ನೇ ಹಂತದ ಪ್ರದೇಶದಲ್ಲಿ 24 ವರ್ಷದ ಮಹಿಳೆಯೊಬ್ಬರ ಮೇಲೆ ಇಬ್ಬರು ವ್ಯಕ್ತಿಗಳು ಅತ್ಯಾಚಾರ ಎಸಗಿದ್ದು, ಚಾಕುವಿನಿಂದ ಇರಿದಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಡಿಎಲ್‌ಎಫ್ 3ನೇ ಹಂತದ ನಾಥುಪುರದಲ್ಲಿ ಸೋಮವಾರ ರಾತ್ರಿ ಘಟನೆ ನಡೆದಿದೆ. ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಲಾಗಿದೆ. ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಾಗಿರುವ ಸಂತ್ರಸ್ತೆಯ ಸ್ಥಿತಿ ಗಂಭೀರವಾಗಿದೆ ಎಂದು ಅವರು ತಿಳಿಸಿದ್ದಾರೆ.

ಆಟೋರಿಕ್ಷಾ ಚಾಲಕನಾಗಿರುವ ಸಂತ್ರಸ್ತೆಯ ಪತಿ, ಡಿಎಲ್‌ಎಫ್ 3ನೇ ಹಂತದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

'ಸೋಮವಾರ, ನನ್ನ ಹೆಂಡತಿಯಿಂದ ನನಗೆ ಕರೆ ಬಂದಿತು. ಈ ವೇಳೆ ಹತಾಶೆಯಿಂದ ಮಾತನಾಡಿದ ಆಕೆ, ಚಾಕುವಿನಿಂದ ಇರಿದಿರುವ ವಿಷಯ ತಿಳಿಸಿದಳು. ಆಕೆ ಎಲ್ಲಿದ್ದಾಳೆ ಎನ್ನುವ ಬಗ್ಗೆ ವಿಚಾರಿಸಿದಾಗ ಅದು ಯಾವ ಪ್ರದೇಶವೆಂದು ಹೇಳಲು ಸಾಧ್ಯವಾಗಲಿಲ್ಲ. ನಂತರ, ಅವಳು ನನ್ನನ್ನು ಮನೆಗೆ ಬರುವಂತೆ ಹೇಳಿದಳು. ನಾನು ಮನೆಗೆ ಹೋದಾಗ ಆಕೆಯ ಮೇಲೆ ಇಬ್ಬರು ಅತ್ಯಾಚಾರವೆಸಗಿದ್ದಾರೆ ಮತ್ತು ಅವರಲ್ಲಿ ಒಬ್ಬರು ಆಕೆಗೆ ಚಾಕುವಿನಿಂದ ಇರಿದಿರುವುದಾಗಿ ತಿಳಿಸಿದಳು' ಎಂದು ದೂರಿನಲ್ಲಿ ತಿಳಿಸಲಾಗಿದೆ.

ಸಂತ್ರಸ್ತೆ ಪರಿಸ್ಥಿತಿ ಗಂಭೀರವಾಗಿರುವುದರಿಂದ ಸದ್ಯ ಹೇಳಿಕೆ ದಾಖಲಿಸಲು ಸಾಧ್ಯವಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಆಕೆಯ ಪತಿ ನೀಡಿರುವ ದೂರಿನ ಆಧಾರದ ಮೇಲೆ ಇಬ್ಬರ ವಿರುದ್ಧ ಐಪಿಸಿ ಸೆಕ್ಷನ್ 376 (ಅತ್ಯಾಚಾರ), 506 (ಅಪರಾಧ ಬೆದರಿಕೆ), 324 (ಘೋರವಾಗಿ ನೋವುಂಟುಮಾಡುವುದು) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಆರೋಪಿಗಳಲ್ಲಿ ಒಬ್ಬನಾದ ಬಿಹಾರ ಮೂಲದ ಅನಿಲ್ ಠಾಕೂರ್ ಎಂಬಾತನನ್ನು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದೇವೆ ಎಂದು ಗುರುಗ್ರಾಮದ ಪೊಲೀಸ್ ಕಮಿಷನರ್ ಕಲಾ ರಾಮಚಂದ್ರನ್ ಪಿಟಿಐಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT