ಆನಂದ್, ಗುಜರಾತ್: ಗುಜರಾತ್‌ನ ಆನಂದ್ ರೈಲು ನಿಲ್ದಾಣದ ಬಳಿ ಮಂಗಳವಾರ ಸಂಜೆ ಸೆಮಿ ಹೈಸ್ಪೀಡ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿ 54 ವರ್ಷದ ಮಹಿಳೆ ಸಾವಿಗೀಡಾಗಿದ್ದಾರೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.
‘ಮೃತ ಮಹಿಳೆಯನ್ನು ಅಹಮದಾಬಾದ್ ನಿವಾಸಿ ಬೆಯತ್ರಿಸ್ ಆರ್ಚಿಬಾಲ್ಡ್ ಪೀಟರ್ ಎಂದು ಗುರುತಿಸಲಾಗಿದೆ. ಆನಂದ್‌ನಲ್ಲಿರುವ ಸಂಬಂಧಿಕರ ಮನೆಗೆ ಹೋಗಲು ಮಹಿಳೆ ಹಳಿ ದಾಟುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಗಾಂಧಿನಗರ ನಿಲ್ದಾಣದಿಂದ ಮುಂಬೈ ಸೆಂಟ್ರಲ್‌ಗೆ ತೆರಳುತ್ತಿದ್ದ ರೈಲಿಗೆ ಆನಂದ್‌ನಲ್ಲಿ ನಿಲುಗಡೆ ಅವಕಾಶ ಇರಲಿಲ್ಲ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ’ ಎಂದು ಅವರು ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.