ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡು: ಮಹಿಳೆ ಮೇಲೆ ಐವರಿಂದ ಲೈಂಗಿಕ ದೌರ್ಜನ್ಯ

ಬಂಧಿತ ಆರೋಪಿಗಳಿಂದ ತಪ್ಪೊಪ್ಪಿಗೆ
Last Updated 23 ಮಾರ್ಚ್ 2022, 15:24 IST
ಅಕ್ಷರ ಗಾತ್ರ

ಚೆನ್ನೈ: ತನ್ನ ಸ್ನೇಹಿತನ ಜತೆ ರಾತ್ರಿ ಮನೆಗೆ ಹಿಂತಿರುಗಿತ್ತಿದ್ದ ಮಹಿಳೆಯನ್ನು ಅಪಹರಿಸಿದ ಐವರು ದುಷ್ಕರ್ಮಿಗಳು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆಘಾತಕಾರಿ ಘಟನೆ ತಮಿಳುನಾಡಿನ ವೆಲ್ಲೂರು ನಗರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಅಲ್ಲದೆ ಆಕೆಯ ಸ್ನೇಹಿತನನ್ನು ಎಟಿಎಂ ಬಳಿಗೆ ಎಳೆದೊಯ್ದು,₹40,000 ವಿತ್ ಡ್ರಾ ಮಾಡಿಸಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದ ಹಿರಿಯ ಪೊಲೀಸ್ ಅಧಿಕಾರಿ, ಆಸ್ಪತ್ರೆಯಲ್ಲಿ ಕೆಲಸ ಮಾಡುವ ಸಂತ್ರಸ್ತ ಮಹಿಳೆ ಆನ್‌ಲೈನ್‌ ಮೂಲಕ ನೀಡಿದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಇದರಲ್ಲಿ ಇಬ್ಬರು ಮಕ್ಕಳು ಇದ್ದಾರೆ. ಆರೋಪಿಗಳು ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದನ್ನು ಮತ್ತು ಆಕೆಯ ಸ್ನೇಹಿತನಿಂದ ₹40,000 ಕಿತ್ತುಕೊಂಡಿದ್ದನ್ನು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು.

ಈ ಸಂಬಂಧ ವಿಧಾನಸಭೆ ಅಧಿವೇಶನದಲ್ಲಿ ವಿಸ್ತೃತ ಹೇಳಿಕೆ ನೀಡಿದ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು, 'ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆ ತನ್ನ ಹುಟ್ಟೂರಿಗೆ ಹೋಗಿ, ಆ ಬಳಿಕ ಆನ್‌ಲೈನ್ ಮೂಲಕ ದೂರು ದಾಖಲಿಸಿದ್ದಾರೆ' ಎಂದು ಹೇಳಿದರು.

ಈ ಘಟನೆ ಮಾರ್ಚ್ 17ರಂದು ನಡೆದಿದ್ದು, ಈ ಪ್ರಕರಣ ಮಂಗಳವಾರ ಬೆಳಕಿಗೆ ಬಂದಿದೆ. ವಿರುಧುನಗರ ಜಿಲ್ಲೆಯಲ್ಲಿ ದಲಿತ ಮಹಿಳೆಯೊಬ್ಬರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ನಾಲ್ವರು ಮಕ್ಕಳು ಸೇರಿದಂತೆ 8 ಮಂದಿ ಬಂಧನವಾದ ಬೆನ್ನಲ್ಲೇ, ಈ ಘಟನೆ ಬೆಳಕಿಗೆ ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT