ಕಾರಿನಡಿ ಸಿಲುಕಿ 4 ಕಿ.ಮೀ ಸಾಗಿದ ಯುವತಿ ಶವ: ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ

ನವದೆಹಲಿ: ಸ್ಕೂಟಿಗೆ ಕಾರು ಡಿಕ್ಕಿ ಹೊಡೆದಿದ್ದರಿಂದ 20 ವರ್ಷದ ಯುವತಿಯೊಬ್ಬರು ಮೃತಪಟ್ಟಿದ್ದು, ಕಾರಿನಡಿ ಸಿಲುಕಿದ್ದ ಆಕೆಯ ಮೃತದೇಹವನ್ನು ಸುಮಾರು 4 ಕಿ.ಮೀ.ವರೆಗೂ ಎಳೆದೊಯ್ದಿರುವ ಘಟನೆಯ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ದೆಹಲಿಯ ಹೊರಭಾಗದ ಸುಲ್ತಾನ್‌ಪುರಿಯಲ್ಲಿ ಭಾನುವಾರ ಬೆಳಿಗ್ಗೆ ಈ ಘಟನೆ ನಡೆದಿದೆ.
Woman dies after being dragged under car in Delhi’s Kanjhawala, 5 arrested#Kanjhawala #KanjhawalaCase #kanjhawalaaccident #KanjhawalaGirlAccident #ManojMittal #Delhi #Delhiaccident #DelhiCrime #DelhiPolice #BJP pic.twitter.com/R4TIWeCeOy
— S. Imran Ali Hashmi (@syedimranhashmi) January 2, 2023
ರಸ್ತೆಯ ಮೇಲೆ ಯುವತಿ ಮೃತದೇಹ ನಗ್ನಾವಸ್ಥೆಯಲ್ಲಿ ಬಿದ್ದಿರುವ, ಆಕೆಯ ಕಾಲುಗಳು ಮುರಿದಿರುವ, ಕಾರಿನಡಿಯಲ್ಲಿ ಆಕೆ ಸಿಲುಕಿದ್ದು, ಕಾರು ಚಲಿಸುತ್ತಿರುವ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
#delhi #Kanjhawala #CCTVVideo pic.twitter.com/QQa0jnZRnv
— Lalit Kumar Sharma (@lalit050530) January 2, 2023
ಈ ಘಟನೆಗೆ ಸಂಬಂಧಿಸಿದಂತೆ ಸಾರ್ವಜನಿಕರು ಸಾಮಾಜಿಕ ಜಾಲತಾಣಗಳ ಮೂಲಕ ವ್ಯಾಪಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬಂಧಿತರನ್ನು ಗಲ್ಲಿಗೆ ಹಾಕಬೇಕು ಎಂದು ಒತ್ತಾಯಿಸುತ್ತಿದ್ದಾರೆ.
ಸ್ಕೂಟಿಗೆ ಡಿಕ್ಕಿ ಹೊಡಿಸಿ ಅಪಘಾತ ಮಾಡಿದ ಸಂಬಂಧ ಮಾರುತಿ ಬಲೆನೊ ಕಾರಿನಲ್ಲಿದ್ದ ಐವರನ್ನು ಪೊಲೀಸರು ಬಂಧಿಸಿದ್ದಾರೆ.
Spoke to Hon’ble LG on Kanjhawala incident. Requested him to take exemplary action against culprits, strictest sections of IPC shud be slapped against them. No leniency shud be showed even if they have high political connections.
He assured that he will take strong action
— Arvind Kejriwal (@ArvindKejriwal) January 2, 2023
ಕುತುಬ್‌ಗಡ ಪ್ರದೇಶದತ್ತ ಹೊರಟಿದ್ದ ಕಾರಿನಡಿ ಯುವತಿಯ ಮೃತದೇಹ ಸಿಲುಕಿತ್ತು. ರೋಹಿಣಿ ಜಿಲ್ಲೆಯ ಖಂಜಾವಲಾ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಹೋಗಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದರು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
Absolute horror and shame in the national capital: the Kanjhawala incident is just gruesome. Culprits must get exemplary punishment. Remember whether it is Aftab or an Amit, law is same for all. Zero tolerance for crime. https://t.co/CPKYZuuE6O
— Rajdeep Sardesai (@sardesairajdeep) January 2, 2023
ಈ ಸಂಬಂಧ ದೀಪಕ್ ಖನ್ನಾ (26), ಅಮಿತ್ ಖನ್ನಾ (25), ಕೃಷ್ಣಾ (27), ಮಿಥುನ್ (26) ಮತ್ತು ಮನೋಜ್ ಮಿತ್ತಲ್ ಎಂಬುವರನ್ನು ಬಂಧಿಸಲಾಗಿದೆ. ಇವರ ವಿರುದ್ಧ ಐಪಿಸಿ ಸೆಕ್ಷನ್ 279 ಮತ್ತು 304–ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ’ ಎಂದು ಡಿಸಿಪಿ ಹರೇಂದ್ರಕುಮಾರ್ ಸಿಂಗ್ ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.