ಮಂಗಳವಾರ, ನವೆಂಬರ್ 29, 2022
29 °C

ದೆಹಲಿಯ ಪಬ್‌ನಲ್ಲಿ ಮಹಿಳೆಯ ಬಟ್ಟೆ ಹರಿದು ಹಲ್ಲೆ: ಎಫ್‌ಐಆರ್ ದಾಖಲು

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯ ಹೆಸರಾಂತ ನೈಟ್ ಕ್ಲಬ್‌ವೊಂದರ ಬೌನ್ಸರ್‌ಗಳು ಮಹಿಳೆಯ ಬಟ್ಟೆ ಹರಿದು ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ. 

ಘಟನೆಗೆ ಸಂಬಂಧಿಸಿದಂತೆ ಮಹಿಳೆಯ ದೂರಿನ ಅನ್ವಯ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. 

ವರದಿಗಳ ಪ್ರಕಾರ, ನೈಟ್ ಕ್ಲಬ್‌ ಪ್ರವೇಶಕ್ಕೆ ಸಂಬಂಧಿಸಿದಂತೆ ಮಹಿಳೆ ಹಾಗೂ ಆಕೆಯ ಸ್ನೇಹಿತರು ಮತ್ತು ಬೌನ್ಸರ್‌ಗಳ ನಡುವೆ ವಾಗ್ವಾದ ಉಂಟಾಗಿತ್ತು.    

ನನ್ನ ಹಾಗೂ ಸ್ನೇಹಿತರ ಜೊತೆ ಅನುಚಿತವಾಗಿ ವರ್ತಿಸಿರುವ ಬೌನ್ಸರ್‌ಗಳು ಹಲ್ಲೆ ನಡೆಸಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. 
 
ಗಾಯಗೊಂಡ ಮಹಿಳೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. 

ಘಟನೆ ಬಗ್ಗೆ ತನಿಖೆ ನಡೆಸುತ್ತಿರುವ ಪೊಲೀಸರು ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸುತ್ತಿದ್ದಾರೆ.  

ಈ ನಡುವೆ ಆರೋಪವನ್ನು ಪಬ್ ಮಾಲೀಕ ನಿರಾಕರಿಸಿದ್ದಾರೆ. ಪೊಲೀಸರಿಗೆ ಲಂಚ ನೀಡದ ಹಿನ್ನೆಲೆಯಲ್ಲಿ ತಪ್ಪಾದ ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ದೂರಿದ್ದಾರೆ. 
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು