ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದೇಶಿ ದೇಣಿಗೆಯಿಂದ ನಡೆಯುವ ಮತಾಂತರಕ್ಕೆ ಮಹಿಳೆಯರು, ಮಕ್ಕಳೇ ಗುರಿ: ಅಶ್ವಿನಿ

ಸುಪ್ರೀಂಕೋರ್ಟ್‌ಗೆ ಅರ್ಜಿದಾರ ಉಪಾಧ್ಯಾಯ ಮಾಹಿತಿ
Last Updated 11 ಡಿಸೆಂಬರ್ 2022, 14:32 IST
ಅಕ್ಷರ ಗಾತ್ರ

ನವದೆಹಲಿ: ವಿದೇಶಿ ದೇಣಿಗೆ ನೆರವಿನಿಂದ ನಡೆಯುವ ಮತಾಂತರಕ್ಕೆ ಮಹಿಳೆ ಮತ್ತು ಮಕ್ಕಳೇ ಗುರಿ. ಇದನ್ನು ತಡೆಯುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಫಲವಾಗಿವೆ ಎಂದು ಸುಪ್ರೀಂಕೋರ್ಟ್‌ಗೆ ಮಾಹಿತಿ ನೀಡಲಾಗಿದೆ.

ಈ ವಿಷಯವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸಿರುವ ಅಶ್ವಿನಿ ಉಪಾಧ್ಯಾಯ ಅವರು, ನ್ಯಾಯಮೂರ್ತಿಗಳಾದ ಎಂ.ಆರ್‌.ಶಾ ಹಾಗೂ ಸಿ.ಟಿ.ರವಿಕುಮಾರ್ ಅವರಿದ್ದ ನ್ಯಾಯಪೀಠಕ್ಕೆ ಲಿಖಿತವಾಗಿ ಮಾಹಿತಿ ಸಲ್ಲಿಸಿದ್ದಾರೆ.

‘ಧಾರ್ಮಿಕ ಮತಾಂತರ ತಡೆಯುವುದಕ್ಕೆ ಸಂಬಂಧಿಸಿ ಸರಿಯಾದ ಕಾನೂನುಗಳೇ ಇಲ್ಲ. ಈ ನ್ಯೂನತೆಯನ್ನೇ ದುರುಪಯೋಗಪಡಿಸಿಕೊಂಡು, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಹಿಂದುಳಿದವರನ್ನು ಮತಾಂತರ ಮಾಡಲಾಗುತ್ತಿದೆ’ ಎಂದು ಅರ್ಜಿದಾರರು ತಿಳಿಸಿದ್ದಾರೆ.

ಕೆಲ ಎನ್‌ಜಿಒಗಳು ಮತಾಂತರ ನಡೆಸುತ್ತಿವೆ. ವಿದೇಶಗಳಿಂದ ದೇಣಿಗೆ ಸ್ವೀಕರಿಸುವ ಈ ಎನ್‌ಜಿಒಗಳಿಗೆ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆಯಡಿ (ಎಫ್‌ಸಿಆರ್‌ಎ) ಹಲವು ವಿನಾಯಿತಿಗಳನ್ನು ನೀಡಲಾಗಿದೆ. ಈ ಕುರಿತು ಕೂಡ ಮರುಪರಿಶೀಲನೆ ನಡೆಸಬೇಕು ಎಂದು ಕೋರಿದ್ದಾರೆ.

ಡಿ. 12ರಂದು ಸುಪ್ರೀಂಕೋರ್ಟ್‌ ಈ ಪಿಐಎಲ್‌ಗೆ ಸಂಬಂಧಿಸಿದ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT