ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಲಿಂಗಾಧಾರಿತ ಹಿಂಸೆ: ಅನನುಕೂಲ ಸ್ಥಿತಿಯಲ್ಲಿರುವ ವರ್ಗದ ಮಹಿಳೆಯರಿಗೆ ಅಪಾಯ’

Last Updated 5 ಅಕ್ಟೋಬರ್ 2020, 11:13 IST
ಅಕ್ಷರ ಗಾತ್ರ

ನವದೆಹಲಿ: ದುರ್ಬಲ ವರ್ಗದ ಮಹಿಳೆಯರು ಹಾಗೂ ಹೆಣ್ಣುಮಕ್ಕಳೇಹೆಚ್ಚಿನ ಸಂಖ್ಯೆಯಲ್ಲಿ ಲಿಂಗಾಧಾರಿತ ಹಿಂಸೆಗೆ ಒಳಗಾಗುತ್ತಿದ್ದಾರೆ ಎನ್ನುವುದಕ್ಕೆ ಉತ್ತರ ಪ್ರದೇಶದ ಹಾಥರಸ್‌ ಹಾಗೂ ಬಲರಾಂಪುರದಲ್ಲಿ ನಡೆದಿರುವ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಗಳೇ ಸಾಕ್ಷಿ ಎಂದು ಭಾರತದಲ್ಲಿರುವ ವಿಶ್ವಸಂಸ್ಥೆ ಕಚೇರಿ ತಿಳಿಸಿದೆ.

‘ಈ ಪ್ರಕರಣಗಳಲ್ಲಿ ಸಂತ್ರಸ್ತೆಯರ ಕುಟುಂಬಕ್ಕೆ ಸೂಕ್ತ ನ್ಯಾಯ ದೊರಕಬೇಕು. ಕುಟುಂಬಕ್ಕೆ ಸಾಮಾಜಿಕ ಬೆಂಬಲ, ಮಾರ್ಗದರ್ಶನ, ಆರೋಗ್ಯ ವ್ಯವಸ್ಥೆ ಹಾಗೂ ಪುನರ್ವಸತಿ ದೊರಕುವಂತೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದುಪ್ರಕಟಣೆ ಉಲ್ಲೇಖಿಸಿದೆ.

‘ಸಾಮಾಜಿಕ ಸೂಚ್ಯಂಕದಲ್ಲಿ ಪರಿಣಾಮಕಾರಿ ಅಭಿವೃದ್ಧಿ ಕಂಡರೂ, ದುರ್ಬಲ ವರ್ಗದ ಮಹಿಳೆಯರು ಹಾಗೂ ಹೆಣ್ಣುಮಕ್ಕಳೇ ಇಂಥ ಕೃತ್ಯದಿಂದ ಘಾಸಿಗೊಳಗಾಗುತ್ತಿದ್ದಾರೆ. ಮಹಿಳೆಯರ ಸುರಕ್ಷತೆಯನ್ನು ಇನ್ನಷ್ಟು ಬಲಪಡಿಸಲು ಭಾರತ ಸರ್ಕಾರವು ಕೈಗೊಂಡಿರುವ ಕ್ರಮಗಳು ಸ್ವಾಗತಾರ್ಹ. ಆದರೆ ಇದಕ್ಕೆ ಇನ್ನಷ್ಟು ಚುರುಕು ದೊರೆಯಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ ಪ್ರಧಾನಿಯವರ ಕರೆಯನ್ನು ನಾವು ಬೆಂಬಲಿಸುತ್ತೇವೆ’ ಎಂದು ಉಲ್ಲೇಖಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT