ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳಾ ದಿನಾಚರಣೆ: CRPF ಬೈಕರ್‌ಗಳಿಂದ ನಕ್ಸಲ್ ಪೀಡಿತ ಪ್ರದೇಶಕ್ಕೆ ಯಾತ್ರೆ

Last Updated 7 ಮಾರ್ಚ್ 2023, 15:59 IST
ಅಕ್ಷರ ಗಾತ್ರ

ನವದೆಹಲಿ: ಅಂತರರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ 75 ಮಹಿಳಾ ಬೈಕರ್‌ಗಳ ತಂಡವು ದೆಹಲಿಯಿಂದ ಛತ್ತೀಸ್‌ಗಢದ ನಕ್ಸಲ್ ಪೀಡಿತ ಪ್ರದೇಶದವರೆಗೆ 1,848 ಕಿಮೀ ಯಾತ್ರೆ ಕೈಗೊಳ್ಳಲಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದರು.

ಮಾರ್ಚ್ 9ರಂದು ಈ ತಂಡವು ದೆಹಲಿಯ ಇಂಡಿಯಾ ಗೇಟ್‌ನಿಂದ ಹೊರಟು ಮಾರ್ಚ್ 25ರಂದು ಛತ್ತೀಸ್‌ಗಢದ ದಕ್ಷಿಣ ಬಸ್ತಾರ್ ಪ್ರದೇಶದ ಜಗದಲ್‌ಪುರದಲ್ಲಿ ತಮ್ಮ ಪ್ರಯಾಣವನ್ನು ಕೊನೆಗೊಳಿಸಲಿದೆ ಎಂದು ಅವರು ತಿಳಿಸಿದ್ದಾರೆ.

‘ದೇಶವು 75ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತಿರುವಾಗ ಮಹಿಳಾ ಶಕ್ತಿ’ ಎಂಬ ಸಂದೇಶವನ್ನು ತಂಡ ಹೊತ್ತು ಸಾಗಲಿದೆ.

ಸಿಬ್ಬಂದಿ ತಮ್ಮ ಅಧಿಕೃತ ಎನ್‌ಫೀಲ್ಡ್ ಬುಲೆಟ್‌ಗಳಲ್ಲಿ ಪ್ರಯಾಣ ಬೆಳೆಸಲಿದ್ದಾರೆ. ಮಾರ್ಚ್ 25ರಂದು ಬಸ್ತಾರ್‌ನ ಜಿಲ್ಲಾ ಕೇಂದ್ರವಾದ ಜಗದಲ್‌ಪುರದ ಕರಣ್‌ಪುರ ಪ್ರದೇಶದಲ್ಲಿ ಕೋಬ್ರಾ (ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್) ಶಿಬಿರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸ್ವಾಗತಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಿಆರ್‌ಪಿಎಫ್ ತನ್ನ 84ನೇ ರೈಸಿಂಗ್ ಡೇ ಆಚರಣೆಯನ್ನು ಮಾರ್ಚ್ 25ರಂದು ಜಗದಲ್‌ಪುರದಲ್ಲಿ ನಡೆಸಲು ನಿರ್ಧರಿಸಿದೆ. ಶಾ ಮುಖ್ಯ ಅತಿಥಿಯಾಗಿರಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT