ಶನಿವಾರ, ಸೆಪ್ಟೆಂಬರ್ 25, 2021
29 °C

ಗರ್ಭಧಾರಣೆ ಮುಂದುವರಿಸಲು ನಿರ್ಧರಿಸುವ ಸ್ವಾತಂತ್ರ್ಯ ಮಹಿಳೆಗಿದೆ: ಕೇರಳ ಹೈಕೋರ್ಟ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕೊಚ್ಚಿ: ಗರ್ಭಧಾರಣೆಯನ್ನು ಮುಂದುವರಿಸಬೇಕೇ ಎಂದು ನಿರ್ಧರಿಸುವ ಮಹಿಳೆಯ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿರುವ ಕೇರಳ ಹೈಕೋರ್ಟ್, ಸೌಮ್ಯ ರೀತಿಯ ಮಾನಸಿಕ ಅಸ್ವಸ್ಥ ತಾಯಿಗೆ ತನ್ನ 22 ವಾರಗಳ ಅಸಹಜ ಭ್ರೂಣವನ್ನು ಗರ್ಭಪಾತ ಮಾಡಿಸಿಕೊಳ್ಳಲು ಅನುಮತಿ ನೀಡಿದೆ.

ಜನನದ ನಂತರ ಮಗು ಅಸಹಜತೆಯಿಂದ ಬಳಲುವ ಅಥವಾ ಅಂಗವಿಕಲತೆಗೆ ಒಳಗಾಗುವ ಅಪಾಯವಿದ್ದರೆ ಗರ್ಭಪಾತ ಮಾಡಿಸಿಕೊಳ್ಳುವ ಹಕ್ಕು ಮಹಿಳೆಗೆ ಇದೆ ಎಂದು ಕೋರ್ಟ್‌ ಹೇಳಿದೆ.

ಈ ಪ್ರಕರಣದಲ್ಲಿ ಮಹಿಳೆಯು ಸೌಮ್ಯ ರೀತಿಯ ಮಾನಸಿಕ ಅಸ್ವಸ್ಥತೆಯನ್ನು ಹೊಂದಿದ್ದಾರೆ. ಅವರ ಭ್ರೂಣವು ‘ಕ್ಲೈನ್‌ಫಲ್ಟರ್‌ ಸಿಂಡ್ರೋಮ್‌’ನಿಂದ ಬಳಲುತ್ತಿದೆ ಎಂದು ಮಹಿಳೆಯನ್ನು ಪರೀಕ್ಷಿಸಿದ ವೈದ್ಯಕೀಯ ತಂಡ ವರದಿ ನೀಡಿತ್ತು. ಇದನ್ನು ಆಧರಿಸಿ ನ್ಯಾಯಾಲಯ ಆದೇಶ ನೀಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು