ಮಂಗಳವಾರ, ನವೆಂಬರ್ 24, 2020
26 °C

ಹಾಥರಸ್‌ ಪ್ರಕರಣ: 29ರಂದು ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಮಹಿಳಾ ಸಂಘಟನೆಗಳ ಕರೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಹಾಥರಸ್‌ನಲ್ಲಿ ದಲಿತ ಮಹಿಳೆ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ವಿರೋಧಿಸಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜೀನಾಮೆಗೆ ಒತ್ತಾಯಿಸಿ ವಿವಿಧ ಮಹಿಳಾ ಸಂಘಟನೆಗಳು ಅ.29ರಂದು ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ನೀಡಿವೆ.

ಅಖಿಲ ಭಾರತೀಯ ಪ್ರಜಾಸತ್ಮಾತ್ಮಕ ಮಹಿಳಾ ಸಂಘಟನೆ, ಭಾರತೀಯ ಮಹಿಳೆಯರ ರಾಷ್ಟ್ರೀಯ ಒಕ್ಕೂಟ, ಅಖಿಲ ಭಾರತ ಪ್ರಗತಿಪರ ಮಹಿಳಾ ಸಂಘಟನೆ ಮತ್ತು ಇತರೆ ಸಂಘ ಸಂಸ್ಥೆಗಳು, ಹೋರಾಟಗಾರರು  ಜಂಟಿಯಾಗಿ ಈ ಪ್ರತಿಭಟನೆ ನಡೆಸುತ್ತಿರುವುದಾಗಿ ಜಂಟಿ ಹೇಳಿಕೆಯಲ್ಲಿ ತಿಳಿಸಿವೆ.

ಹಾಥರಸ್ ಪ್ರಕರಣದ ತನಿಖೆ ನ್ಯಾಯಯುತವಾಗಿ ನಡೆಯಬೇಕು, ಜೀವನ, ಜೀನವೋಪಾಯ, ಪ್ರಜಾಪ್ರಭುತ್ವ ಹಕ್ಕುಗಳನ್ನು ರಕ್ಷಿಸಬೇಕು ಮತ್ತು ಹಿಂಸಾಚಾರ ಮುಕ್ತ ಜೀವನಕ್ಕೆ ಅವಕಾಶ ಕಲ್ಪಿಸಬೇಕೆಂದು ಒತ್ತಾಯಿಸಿ ಮಹಿಳಾ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.

‘ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ, ಮೇಲ್ಜಾತಿಗೆ ಸೇರಿದ ಆರೋಪಿಗಳನ್ನು ರಕ್ಷಿಸಲು ಪ್ರಯತ್ನಿಸುತ್ತಿದೆ. ಠಾಕೂರ್ ಸಮುದಾಯದವರಿಗೆ ಜಾತಿ ಪಂಚಾಯ್ತಿಗಳನ್ನು ನಡೆಸಲು ಅವಕಾಶ ನೀಡಿ, ಸಂತ್ರಸ್ತೆಯ ಕುಟುಂಬಕ್ಕೆ ಬಹಿರಂಗವಾಗಿ ಸವಾಲು ಹಾಕಲು ಅವಕಾಶ ನೀಡುತ್ತಿದೆ‘ ಎಂದು ಸಂಘಟನೆಗಳು ಹೇಳಿಕೆಯಲ್ಲಿ ಆರೋಪಿಸಿವೆ.

‘ಅತ್ಯಾಚಾರ ಎಸಗಿರುವ ವಿಚಾರವನ್ನು ತನಿಖಾ ಸಂಸ್ಥೆ ನಿರ್ದಯವಾಗಿ ನಿರಾಕರಿಸುತ್ತಿದೆ. ಕುಟುಂಬವನ್ನು ಬೆಂಬಲಿಸಿದ ಜನರ ವಿರುದ್ಧ ಪ್ರಕರಣಗಳು ದಾಖಲಾಗಿವೆ‘ ಎಂದು ಸಂಘಟನೆಗಳು ದೂರಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು