ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುರ್ಮು ಬಗ್ಗೆ ಉದಿತ್ ರಾಜ್ ವಿವಾದಾತ್ಮಕ ಹೇಳಿಕೆ: ರಾಷ್ಟ್ರೀಯ ಮಹಿಳಾ ಆಯೋಗ ನೋಟಿಸ್

Last Updated 6 ಅಕ್ಟೋಬರ್ 2022, 10:05 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಉಲ್ಲೇಖಿಸಿ ವಿವಾದಾತ್ಮಕ ಹೇಳಿಕೆ ನೀಡಿರುವ ಕಾಂಗ್ರೆಸ್ ನಾಯಕ ಉದಿತ್ ರಾಜ್ ಅವರಿಗೆ ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯು) ನೋಟಿಸ್ ಜಾರಿ ಮಾಡಿದೆ.

ಈ ವಿಚಾರವನ್ನು ಎನ್‌ಸಿಡಬ್ಲ್ಯು ಅಧ್ಯಕ್ಷೆ ರೇಖಾ ಶರ್ಮಾ ಖಚಿತಪಡಿಸಿದ್ದಾರೆ.

ಉದಿತ್ ರಾಜ್ ಅವರ ಹೇಳಿಕೆ ಕೇವಲ ಮಹಿಳೆಯ ವಿರುದ್ಧ ಮಾತ್ರವಲ್ಲದೆ ಸಾಂವಿಧಾನಿಕ ಮುಖ್ಯಸ್ಥರ (ರಾಷ್ಟ್ರಪತಿ) ವಿರುದ್ಧವಾಗಿದೆ. ಮಹಿಳೆ ಎಂಬ ಕಾರಣಕ್ಕೆ ಆಕೆಯನ್ನು (ದ್ರೌಪದಿ ಮುರ್ಮು) ಟಾರ್ಗೆಟ್ ಮಾಡಲಾಗಿದೆಯೇ ಎಂದು ರೇಖಾ ಶರ್ಮಾ ಪ್ರಶ್ನಿಸಿದ್ದಾರೆ.

ಉದಿತ್ ರಾಜ್ ನೀಡಿರುವ ಹೇಳಿಕೆ ಖಂಡನೀಯ ಮತ್ತು ಅವಹೇಳನಕಾರಿ ಭಾಷೆ ಬಳಸಿರುವುದು ನಾಚಿಕೆಗೇಡಿನ ಸಂಗತಿಯಾಗಿದ್ದು, ನೋಟಿಸ್ ಜಾರಿ ಮಾಡಲಾಗಿದೆ ಎಂದು ರೇಖಾ ಶರ್ಮಾ ತಿಳಿಸಿದ್ದಾರೆ.

‘ದ್ರೌಪದಿ ಮುರ್ಮು ಅವರಂತಹ ರಾಷ್ಟ್ರಪತಿ ಯಾವ ದೇಶಕ್ಕೂ ಸಿಗಬಾರದು. ಚಮಚಾಗಿರಿ ಮಾಡುವುದಕ್ಕೂ ಒಂದು ಮಿತಿಯಿದೆ. ಶೇ 70ರಷ್ಟು ಜನರು ಗುಜರಾತ್ ಉಪ್ಪನ್ನು ತಿನ್ನುತ್ತಾರೆ ಎಂದು ಹೇಳಲಾಗುತ್ತದೆ. ಉಪ್ಪು ತಿಂದು ಇಲ್ಲಿಯೇ ಜೀವನ ನಡೆಸಿದರೆ ನಮ್ಮ ಜನರ ಸಮಸ್ಯೆ ಗೊತ್ತಾಗುತ್ತದೆ’ ಎಂದು ಉದಿತ್ ರಾಜ್ ಟ್ವೀಟ್ ಮಾಡಿದ್ದಾರೆ.

ಟ್ವೀಟ್ ವಿವಾದದ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ಉದಿತ್ ರಾಜ್ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದಾರೆ. ಈ ಎಲ್ಲ ಬೆಳವಣಿಗೆಗಳ ನಡುವೆ ರಾಜ್ ಹೇಳಿಕೆಗೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT