ನವದೆಹಲಿ: ಮಹಿಳಾ ಹಕ್ಕುಗಳ ಹೋರಾಟಗಾರ್ತಿ, ಲೇಖಕಿ ಹಾಗೂ ಕವಯಿತ್ರಿ ಕಮಲಾ ಭಾಸಿನ್(75) ಶನಿವಾರ ನಿಧನರಾಗಿದ್ದಾರೆ.

1946 ರಲ್ಲಿ ಪಂಜಾಬ್ನಲ್ಲಿ ಜನಿಸಿದ್ದ ಅವರು ನವದೆಹಲಿಯಲ್ಲಿ ವಾಸಿಸುತ್ತಿದ್ದರು. ಕ್ಯಾನ್ಸರ್ ಪೀಡಿತರಾಗಿದ್ದ ಕಮಲಾ ಭಾಸಿನ್ಶನಿವಾರ ಬೆಳಿಗ್ಗೆ ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು ಎಂದು ಪಿಟಿಐ ವರದಿ ಮಾಡಿದೆ.

ಅವರ ನಿಧನಕ್ಕೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್, ಡಿಸಿಎಂ ಮನಿಶ್ ಸಿಸೋಡಿಯಾ, ಸಂಸದ ಶಶಿ ತರೂರ್, ಸಾಮಾಜಿಕ ಕಾರ್ಯಕರ್ತ ಹರ್ಷ ಮಂದರ್ ಸೇರಿದಂತೆ ಅನೇಕರು ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ.

ಕಮಲಾ ಅವರು ಹಿಂದಿ ಮತ್ತು ಇಂಗ್ಲಿಷ್ನಲ್ಲಿ ಲೇಖನಗಳನ್ನು, ಕವನಗಳನ್ನು ಬರೆಯುವುದಲ್ಲದೇ ಪ್ರಧಾನವಾಗಿ ಮಹಿಳಾ ಹಕ್ಕುಗಳ ಪರ ಹೋರಾಟಗಳಲ್ಲಿ ಪಾಲ್ಗೊಳ್ಳುತ್ತಿದ್ದರು.

ಅವರು ಭಾರತ ಮತ್ತು ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಮಹಿಳಾ ಪರ ಗಟ್ಟಿ ಧನಿಯಾಗಿದ್ದರು ಎಂದು ಅನೇಕ ಲೇಖಕರು, ಸಾಹಿತಿಗಳು ಹಾಗೂ ಸಾಮಾಜಿಕ ಹೋರಾಟಗಾರರು ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ:ವಿಶ್ವಸಂಸ್ಥೆಯಲ್ಲಿ ಪಾಕ್ ಪಿಎಂ ಇಮ್ರಾನ್ ಬೆವರಿಳಿಸಿದ ಅಧಿಕಾರಿಣಿ ಸ್ನೇಹಾ ದುಭೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.