ಶುಕ್ರವಾರ, ಮಾರ್ಚ್ 31, 2023
23 °C

ಆಂಧ್ರಪ್ರದೇಶ | ಚಂದ್ರಬಾಬು ನಾಯ್ಡು ವಿರುದ್ಧ ಸ್ಪರ್ಧಿಸಲ್ಲ: ನಟ ವಿಶಾಲ್ ಸ್ಪಷ್ಟನೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಅಮರಾವತಿ: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ, ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ವಿರುದ್ಧ ಚುನಾವಣೆಗೆ ಸ್ಪರ್ಧಿಸಲ್ಲ ಎಂದು ನಟ ವಿಶಾಲ್ ಸ್ಪಷ್ಟಪಡಿಸಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜನರ ಸೇವೆ ಮಾಡಲು ರಾಜಕೀಯಕ್ಕೆ ಬರುವ ಅಗತ್ಯವಿಲ್ಲ. ಸಾರ್ವಜನಿಕರ ಸೇವೆ ಮಾಡುವವರೆಲ್ಲ ರಾಜಕಾರಣಿಗಳೇ’ ಎಂದಿದ್ದಾರೆ. 

ಆಂಧ್ರಪ್ರದೇಶದ ಕುಪ್ಪಂ ವಿಧಾನಸಭಾ ಕ್ಷೇತ್ರದಲ್ಲಿ ಚಂದ್ರಬಾಬು ನಾಯ್ಡು ವಿರುದ್ಧ ವಿಶಾಲ್ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು.  

ಚಂದ್ರಬಾಬು ನಾಯ್ಡು ಅವರಿಗಿಂತಲೂ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರನ್ನು ನಾನು ಹೆಚ್ಚು ಇಷ್ಟಪಡುತ್ತೇನೆ ಎಂದು ವಿಶಾಲ್ ಹೇಳಿಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು