ಬುಧವಾರ, ಜುಲೈ 28, 2021
29 °C

ತಮಿಳುನಾಡು ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮಾಲೀಕ ಸೇರಿ ಏಳು ಜನರು ಸಾವು

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟ

ಚೆನ್ನೈ: ತಮಿಳುನಾಡು ರಾಜಧಾನಿ ಚೆನ್ನೈನಿಂದ 190 ಕಿ.ಮೀ ದೂರದಲ್ಲಿರುವ ಕಡಲೂರಿನ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಏಳು ಜನರು ಮೃತಪಟ್ಟಿದ್ದು, ಇತರ ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಸ್ಫೋಟದಲ್ಲಿ ಕಾರ್ಖಾನೆ ಮಾಲೀಕರೂ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಫೋಟದಿಂದಾಗಿ ಕುಸಿದ ಕಾಂಕ್ರಿಟ್‌ನ ಅವಶೇಷಗಳ ಬಳಿ ನಿಂತು ಆಘಾತಕ್ಕೊಳಗಾದ ಜನರು ಅಳುತ್ತಿರುವ ದೃಶ್ಯಗಳು ಕಂಡುಬಂದಿವೆ. ಸುತ್ತಲೂ ಮೃತದೇಹಗಳು ಬಿದ್ದಿದ್ದು, ಸ್ಥಳದಲ್ಲಿ ಅಪಾರ ಜನಸಮೂಹ ಕೂಡ ಸೇರಿದೆ.

ಕಾಟ್ಟ್ ಮನ್ನಾರ್ ಕೋಯಿಲ್ ಬಳಿ ಪರವಾನಗಿ ಪಡೆದು ನಡೆಸುತ್ತಿದ್ದ ಘಟಕವಾಗಿದೆ. ಇವರೆಲ್ಲರೂ ಕಾರ್ಮಿಕರಾಗಿದ್ದು, ಇವರು ದೇಸಿ ಬಾಂಬ್‌ಗಳನ್ನು ತಯಾರಿಸುತ್ತಿದ್ದರೋ ಅಥವಾ ಅನುಮತಿ ಪಡೆದಿದಿದ್ದ ಸ್ಫೋಟಕಗಳನ್ನು ಮಾತ್ರ ತಯಾರಿಸುತ್ತಿದ್ದರೋ ಎನ್ನುವ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಕಡಲೂರು ಪೊಲೀಸ್ ಸೂಪರಿಂಟೆಂಡೆಂಟ್ ಅಭಿನವ್ ತಿಳಿಸಿದ್ದಾರೆ.

ಕೊರೊನಾ ವೈರಸ್ ಬಿಕ್ಕಟ್ಟಿನ ಮಧ್ಯೆ ಶೇ 100ರಷ್ಟು ಉದ್ಯೋಗಿಗಳೊಂದಿಗೆ ಕೆಲಸ ಪುನರಾರಂಭಿಸಲು ರಾಜ್ಯ ಸರ್ಕಾರ ಕೈಗಾರಿಕೆಗಳಿಗೆ ಅವಕಾಶ ನೀಡಿರುವ ವೇಳೆಯಲ್ಲೇ ಈ ಅವಘಡ ಸಂಭವಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು