ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೈದರಾಬಾದ್‌ನಲ್ಲಿ ಬೆಂಕಿ ಅವಘಡ: 12 ಮಂದಿಗೆ ಗಾಯ

Last Updated 21 ಜನವರಿ 2021, 11:08 IST
ಅಕ್ಷರ ಗಾತ್ರ

ಹೈದರಾಬಾದ್‌: ‘ಸಿಲಿಂಡರ್‌ನಿಂದ ಅನಿಲ ಸೋರಿಕೆಯಾಗಿ ಇಲ್ಲಿನ ಆಭರಣ ಘಟಕದ ಆವರಣದಲ್ಲಿ ಬೆಂಕಿ ಅವಘಢ ಸಂಭವಿಸಿದ್ದು, 12 ಮಂದಿ ವಲಸೆ ಕಾರ್ಮಿಕರಿಗೆ ಸುಟ್ಟ ಗಾಯಗಳಾಗಿವೆ’ ಎಂದು ಪೊಲೀಸರು ಗುರುವಾರ ಹೇಳಿದ್ದಾರೆ.

ಬುಧವಾರ ರಾತ್ರಿ ಘಟನೆ ನಡೆದಿದೆ.ಅನಿಲ ಸೋರಿಕೆಯಾಗಿ ಎರಡು ಕೊಠಡಿಗಳಿಗೆ ಬೆಂಕಿ ಆವರಿಸಿತ್ತು. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿ, ಕಾರ್ಮಿಕರನ್ನು ರಕ್ಷಿಸಿದರು.

ಇವರು ಪಶ್ಚಿಮ ಬಂಗಾಳದವರು ಎಂದು ಹೇಳಲಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT